ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಕರಡು ಸಮಿತಿಯ ಅಧ್ಯಕ್ಷ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.
ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಕೆ. ಕಸ್ತೂರಿರಂಗನ್ ಅವರು ನಿಧನರಾದರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್ ಅವರು ರಾಜ್ಯಸಭೆಯ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು.
ಅಲ್ಲದೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.