PM Modi absent from all-party meeting.. Bihar elections are important to him, says CM Siddaramaiah

ಉಗ್ರರ ದಾಳಿ; ಸರ್ವ ಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು.. ಅವರಿಗೆ ಬಿಹಾರ ಚುನಾವಣೆ ಪ್ರಚಾರ ಮುಖ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ

ಮೈಸೂರು: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.

ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು

ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು.

ಹಿಂದೆ ಪುಲ್ವಾಮಾದಲ್ಲಿಯೂ 40 ಜನ ಯೋಧರು ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯಲ್ಲಿ ಭದ್ರತಾ ವೈಫಲ್ಯವಾಗಿದೆ. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಹಾಗೂ ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ ? ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರ ರಕ್ಷಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಿದ್ದು, ಅವರು ಎಲ್ಲ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತಂದಿದ್ದಾರೆ ಎಂದರು.

ನಾವು ಯುದ್ಧದ ಪರ ಇಲ್ಲ

ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ

ಕಾಶ್ಮೀರದ ಉಗ್ರರ ದಾಳಿಗೆ ಸಂಭಂಧಿಸಿದಂತೆ ಕರೆಯಲಾಗಿದ್ದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿಯವರು ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಮಹತ್ವಯುತ ಸಭೆಯಾಗಿದ್ದು, ಪ್ರಧಾನಿಯವರು ಈ ಸಭೆಯಲ್ಲಿ ಹಾಜರಿರಬೇಕಿತ್ತು. ಆದರೆ ಅವರಿಗೆ ಈ ಸಭೆಗಿಂತ ಬಿಹಾರದ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಪ್ರಧಾನಿಯವರು ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಚಾಮರಾಜನಗರಕ್ಕೆ 20 ಬಾರಿ ಮುಖ್ಯಮಂತ್ರಿಯಾಗಿ ಭೇಟಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,ಚಾಮರಾಜನಗರಕ್ಕೆ ಮೊದಲ ಬಾರಿ ಭೇಟಿ ನೀಡಿದಾಗಲೇ, ಅಲ್ಲಿಗೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆಂಬ ಕಳಂಕ ತೊಡೆದುಹೋಯಿತು ಎಂದರು.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!