ಬೆಂಗಳೂರು: ಉಗ್ರರ ದಾಳಿ ಕುರಿತಂತೆ ಪಾಕಿಸ್ತಾನದ ಜೊತೆ ಯುದ್ಧ ಅಗತ್ಯವಿಲ್ಲ, ಬದಲಿಗೆ ಉಗ್ರರ ವಿರುದ್ಧ ಕ್ರಮ, ದೇಶದಲ್ಲಿ ಶಾಂತಿ ಮುಖ್ಯ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರ ಹೇಳಿಕೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ಕುರಿತಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸಿಎಂ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನದ ರತ್ನ ಎಂದು ಲೇವಡಿ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, “ಪಾಕಿಸ್ತಾನ ರತ್ನ” ಸಿಎಂ ಸಿದ್ದರಾಮಯ್ಯ ನವರೇ,
ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು.
ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರೆಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ.
ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದಿದ್ದಾರೆ.