Suspension of 18 MLAs: BJP surrenders to Speaker who called it dictatorship

ತಿಂಗಳು ಕಳೆದರು BJP ಶಾಸಕರಿಗೆ ತಪ್ಪಿಲ್ಲ ಅಮಾನತು ಶಿಕ್ಷೆ.. ಸ್ಪೀಕರ್ ಹೇಳಿದ್ ಇಷ್ಟು

ಮಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರ ಅಮಾನತು ಮಾಡಿ (Suspended) ತಿಂಗಳು ಕಳೆದಿದೆ. ಆದರೆ ಈ ಅಮಾನತು ಸದನದ ತೀರ್ಮಾನ. ಆದ್ದರಿಂದ ಅವರ ಅಮಾನತು ಹಿಂಪಡೆಯುವ ವಿಚಾರದಲ್ಲೂ ನಾನೊಬ್ಬನೇ ತೀರ್ಮಾನ ಕೈಗೊಳ್ಳಲಾಗದು ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದ‌ರ್ (UT Khader) ಹೇಳಿದ್ದಾರೆ.

ಶಾಸಕರನ್ನು ಅಮಾನತುಗೊಳಿಸಿದ ವಿಚಾರದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ವಿರುದ್ಧ ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆ ವಿರುದ್ಧ ಹಕ್ಕುಚ್ಯುತಿಗೆ ಕೆಲ ಕಾಂಗ್ರೆಸ್ ಶಾಸಕರು ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಕೆಲ ಶಾಸಕರಿಗೆ ಏನಾದರೂ ಮಾತನಾಡುವ ಚಾಳಿ ಇದೆ ಎಂದು ಬೇಸರ ಹೊರಹಾಕಿದ್ದಾರೆ.

ತಮಗೆ ಪ್ರಚಾರ ಸಿಗುತ್ತದೆ ಎಂದು ಆ ರೀತಿ ಮಾತನಾಡ್ತಾರೆ. ಅವರ ಹೇಳಿಕೆ ಸಂವಿಧಾನಕ್ಕೆ ಬದ್ಧವಾಗಿರಬೇಕು. ಈ ಕುರಿತು ಶಾಸಕರು ಹಕ್ಕುಚ್ಯುತಿ ಸಮಿತಿಗೆ ದೂರು ಕೊಟ್ಟಿದ್ದಾರೆ. ಸಮಿತಿಯೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ನಿವೃತ್ತ ಡಿಜಿಪಿ ಮತ್ತು ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡದ ಇದೆ ಎಂದು ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಆರೋಪಿಸಿರುವ ಕುರಿತು ಮತ್ತು ಈ ಬಗ್ಗೆ ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿದ ಖಾದರ್ ನಾನು ತನಿಖಾ ಏಜೆನ್ಸಿ ಅಲ್ಲ. ನಾನು ಸಾರ್ವಜನಿಕ ಹುದ್ದೆಯಲ್ಲಿರುವವನು. ಅವರು ಈ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಿ. ನನ್ನ ಕಚೇರಿಗೆ ಪತ್ರ ಬಂದಿದೆಯೇ ಎಂದು ಪರಿಶೀಲನೆ ನಡೆಸುತ್ತೇನೆ. ಅವರಲ್ಲಿ ನಿಜವಾಗಿಯೂ ಪುರಾವೆಗಳಿದ್ದಲ್ಲಿ ತನಿಖಾ ಸಂಸ್ಥೆಗೆ ಕೊಡಲಿ ಎಂದರು.

ಪಹಲ್‌ಗಾಮ್ ಉಗ್ರರ ದಾಳಿ ಪ್ರಕರಣದಲ್ಲಿ ‘ಯುದ್ಧ ಬೇಡ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ದೇಶದ ಏಕತೆ, ಒಗ್ಗಟ್ಟನ್ನು ಮುರಿಬೇಕೆಂಬುದೇ ಈ ಸಂಚಿನ ಉದ್ದೇಶ. ಅದಕ್ಕೆ ನಾವು ಆಸ್ಪದ ಕೊಡಬಾರದು.

ದುರ್ಬಲಗೊಳಿಸಲು ನಾವು ಪ್ರಯತ್ನ ಪಟ್ಟರೆ ಸಂಚುಕೋರರಿಗೆ ಸಹಾಯ ಮಾಡಿದ ಹಾಗಾಗುತ್ತದೆ. ಕೃತ್ಯ ಎಸಗಿದರನ್ನು ಮತ್ತು ಬೆಂಬಲ ನೀಡಿದವರನ್ನು ಮಟ್ಟ ಹಾಕಬೇಕು.

ಯುದ್ಧ ನಡೆಸುವ ಬಗ್ಗೆ ಸರ್ವಪಕ್ಷ ಸಭೆ, ಅಧಿಕಾರಿಗಳು, ಕೇಂದ್ರ ಸರಕಾರ ನಿರ್ಧಾರ ಮಾಡುತ್ತದೆ. ಈ ವಿಚಾರದಲ್ಲಿ ಇಡೀ ದೇಶ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!