CM Siddaramaiah's raising of hand against police officer is evidence of goon behavior: BY Vijayendra

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಅಧಿಕಾರ ಮದದಲ್ಲಿ ತೇಲುತ್ತಿರುವ ಸಿದ್ದರಾಮಯ್ಯನವರ ನಡೆ, ನುಡಿಗಳು ಇತ್ತೀಚಿನ ದಿನಗಳಲ್ಲಿ ವಿಪರೀತಕ್ಕೆ ಹೋಗುತ್ತಿದೆ. ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ದಕ್ಷ ಜಿಲ್ಲಾಧಿಕಾರಿಯೊಬ್ಬರನ್ನು ಕೇವಲವಾಗಿ ಅಪಮಾನಿಸಿ, ತಮ್ಮ ಸಂಸ್ಕೃತಿ ಹೀನ ನಡುವಳಿಕೆಯನ್ನು ಸಿದ್ದರಾಮಯ್ಯನವರು ಅನಾವರಣ ಮಾಡಿಕೊಂಡಿದ್ದರು.

ಅವರ ವರ್ತನೆ ಇಂದು – ನಿನ್ನೆಯದಲ್ಲ, ತಮ್ಮ ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ಪ್ರದರ್ಶಿಸಿದ ಘಟನೆ ಇನ್ನೂ ಹಸಿಯಾಗಿಯೇ ಇದೆ. ಅದೇ ರೀತಿ ಮೈಸೂರು ಭಾಗದ ಹಿರಿಯ ರಾಜಕಾರಿಣಿಯಾಗಿದ್ದ ನಂಜನಗೂಡಿನ ದಿವಂಗತ ಎಂ.ಮಹದೇವು ಅವರ ಮೇಲೂ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ʼಸಿದ್ದು-ಗುದ್ದುʼ ಪ್ರಕರಣ ಎಂದೇ ವ್ಯಾಖ್ಯಾನಿಸಿದ್ದವು.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತವರಿಗೆ ಅನುಭವದ ಹಿರಿತನ, ನಡುವಳಿಕೆ, ಹಾಗೂ ಮಾತುಗಳನ್ನು ಮಾಗಿಸಬೇಕು, ಆದರೆ ಸಿದ್ದರಾಮಯ್ಯನವರ ವಿಷಯದಲ್ಲಿ ಇದು ತಿರುಗು-ಮುರುಗಾಗಿದೆ, ದಿನೇ ದಿನೇ ಅವರು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ.

ಹತಾಶೆಯಿಂದ ಜನರು ಹಾಗೂ ಅಧಿಕಾರಿಗಳ ಮೇಲೆ ಅಹಂಕಾರ ಹಾಗೂ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ. ಇದು ಅತ್ಯಂತ ದುರ್ದೈವದ ಹಾಗೂ ಖಂಡನೀಯ ವರ್ತನೆಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಹುದೊಡ್ಡ ಹಿನ್ನೆಲೆಯಿದೆ, ಆ ಸ್ಥಾನದಲ್ಲಿ ಕುಳಿತ ಅನೇಕ ಮಹನೀಯರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮೇರುಮಟ್ಟಕ್ಕೆ ಕೊಂಡೊಯ್ದಿದ್ದಾರೆ, ವಿಶ್ವಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ.

ಕರ್ನಾಟಕ ಎಂದರೆ ಸಜ್ಜನಿಕೆಯ ರಾಜಕಾರಣ, ಸಂಸ್ಕೃತಿ-ಸಂಸ್ಕಾರದ ನೆಲೆಬೀಡು ಎಂಬ ಮಾತಿದೆ, ಆದರೆ ಸಿದ್ದರಾಮಯ್ಯನವರ ವರ್ತನೆಯಿಂದಾಗಿ ಇತಿಹಾಸದ ಪರಂಪರೆಗೆ ಕಪ್ಪು ಮಸಿ ಬಳಿಯುತ್ತಿದೆ.

ಕರ್ನಾಟಕದ ಗೌರವ ಹಾಗೂ ಮುಖ್ಯ ಮಂತ್ರಿ ಸ್ಥಾನದ ಘನತೆ ಸಂಪೂರ್ಣ ಕುಗ್ಗುತ್ತಿದೆ. ರಾಷ್ಟ್ರ ಭಕ್ತರೆಂದರೆ ಕೆಂಡಕಾರುವ, ದೇಶ ಸುರಕ್ಷತೆಯ ಬಗ್ಗೆ ಉಡಾಫೆಯ ಮಾತನಾಡುವ ಸಿದ್ದರಾಮಯ್ಯನವರಿಂದಾಗಿ ಇಡೀ ರಾಷ್ಟ್ರ ‘ಭಾರತದ ಸುಭದ್ರತೆಗೆ’ ಒಕ್ಕೊರಲ ದನಿಯಾಗಿ ನಿಂತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದ ಮುಖ್ಯಮಂತ್ರಿ ವರ್ತಿಸುತ್ತಿದ್ದಾರೆ.

ಕರ್ನಾಟಕದ ಜನತೆಯ ದೇಶಾಭಿಮಾನವನ್ನು ಮೆಟ್ಟಿ ನಿಲ್ಲುವ ವರ್ತನೆ ಸಿದ್ದರಾಮಯ್ಯನವರು ತೋರುತ್ತಿದ್ದಾರೆ, ಅದರ ಮುಂದುವರೆದ ಭಾಗ ಬೆಳಗಾವಿಯ ಘಟನೆ.

ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುವ ಮೂಲಕ ರಾಷ್ಟ್ರ ಭಕ್ತಿ ಮೆರೆದ ದಿಟ್ಟ ಮಹಿಳೆಯರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ.

ಕರ್ತವ್ಯ ನಿರತ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ದರ್ಪ ತೋರಿ ಅವರ ಮೇಲೆ ಹಲ್ಲೆಗೆ ಮುಂದಾದ ಸಿದ್ದರಾಮಯ್ಯನವರ ವರ್ತನೆ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ಹಾಗೂ ಇಡೀ ಪೊಲೀಸ್‌ ಇಲಾಖೆಗೆ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇನೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!