The suspension case of 18 BJP MLAs has reached the Governor

ರಾಜ್ಯಪಾಲರ ಅಂಗಳ ತಲುಪಿದ BJP 18 ಶಾಸಕರ ಅಮಾನತು ಪ್ರಕರಣ

ಬೆಂಗಳೂರು: ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ (BJP) 18 ಶಾಸಕರ ಅಮಾನತು (MLA Suspended) ಮಾಡಿ ತಿಂಗಳು ಕಳೆದಿದೆ. ಆದರೆ ಈ ಅಮಾನತು ಸದನದ ತೀರ್ಮಾನ. ಆದ್ದರಿಂದ ಅವರ ಅಮಾನತು ಹಿಂಪಡೆಯುವ ವಿಚಾರದಲ್ಲೂ ನಾನೊಬ್ಬನೇ ತೀರ್ಮಾನ ಕೈಗೊಳ್ಳಲಾಗದು ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದ‌ರ್ (U.T. Khader) ಹೇಳಿದ್ದಾರೆ.

ಇದರ ಬೆನ್ನಲ್ಲೇ ಬಿಜೆಪಿ ನಿಯೋಗ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಪತ್ರಸಲ್ಲಿಸಿ, ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದೆ.

ಈ ಕುರಿತು ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು, ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದಿದ್ದಾರೆ.

ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ.

ದೇಶದಲ್ಲಿ ಕಾಂಗ್ರೆಸ್‌ ತುರ್ತು ಪರಿಸ್ಥಿತಿಯನ್ನು ತಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಅಧಿವೇಶನದಲ್ಲಿ ಮಾತಾಡಿ ಎಂದೇ ಜನರು ನಮಗೆ ಮತ ನೀಡಿದ್ದಾರೆ. ನಿತ್ಯದ ಕೆಲಸಗಳಿಗೂ ಈ ಅಮಾನತು ಕ್ರಮ ಅಡ್ಡಿಯಾಗಿದೆ ಎಂದರು.

ಈ ಹಿಂದೆ ಕಾಂಗ್ರೆಸ್‌ ಶಾಸಕರು ಸ್ಪೀಕರ್‌ ಪೀಠಕ್ಕೆ ನುಗ್ಗಿದ್ದರು. ಆಗ ಪ್ರಜಾಪ್ರಭುತ್ವದ ಆಶಯದಂತೆಯೇ ಬಿಜೆಪಿ ಸರ್ಕಾರ ನಡೆದುಕೊಂಡಿತ್ತು. ಆಡಳಿತ ಪಕ್ಷದಂತೆ ವಿರೋಧ ಪಕ್ಷವೂ ಮುಖ್ಯ.

ಕಾನೂನು ಸಚಿವರ ಜೊತೆಗೆ ಹಾಗೂ ಸ್ಪೀಕರ್‌ ಜೊತೆಗೆ ಮಾತಾಡಲಾಗಿದೆ. ಈ ಅಮಾನತು ಆದೇಶವನ್ನು ವಾಪಸ್‌ ಪಡೆಯಬೇಕೆಂದು ಆಗ್ರಹಿಸಲಾಗಿದೆ. ಈ ಕುರಿತು ರಾಜ್ಯಪಾಲರ ಗಮನಕ್ಕೆ ತರಲಾಗಿದೆ. ರಾಜ್ಯಪಾಲರು ಸ್ಪೀಕರ್‌ ಜೊತೆ ಮಾತಾಡುತ್ತೇನೆ ಹಾಗೂ ಪತ್ರ ಬರೆಯುತ್ತೇನೆ ಎಂದು ತಿಳಿಸಿದ್ದಾರೆ ಎಂದರು.

ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿಯಿಂದ ಹಿಡಿದು ಸಚಿವರು, ಶಾಸಕರು, ಭಯೋತ್ಪಾದಕ ದಾಳಿಯ ಬಗ್ಗೆ ತಪ್ಪಾಗಿ ಹೇಳುತ್ತಿದ್ದಾರೆ. ಹಿಂದೂ ಧರ್ಮದ ಬಗ್ಗೆ ಕೇಳಿಯೇ ಉಗ್ರರು ಶೂಟ್‌ ಮಾಡಿದ್ದಾರೆ.

ಸಚಿವ ಆರ್‌.ಬಿ.ತಿಮ್ಮಾಪುರ ಅವರ ಪ್ರಕಾರ, ಉಗ್ರರು ಬಹಳ ಅವಸರದಲ್ಲಿದ್ದು, ಕೂಡಲೇ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕುಟುಂಬದವರೇ ಘಟನೆಯನ್ನು ವಿವರಿಸಿದ್ದಾರೆ. ಇಷ್ಟಿದ್ದರೂ ಧರ್ಮದ ಆಧಾರದಲ್ಲಿ ಮಾಡಿಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಿದರೆ ಅವರನ್ನು ರಥದಲ್ಲಿ ಮೆರವಣಿಗೆ ಮಾಡಿ ಆಹ್ವಾನ ಮಾಡುತ್ತಾರೆ. ಹಾಗೆಯೇ ಅವರಿಗೆ ಪಾಕಿಸ್ತಾನದ ಉನ್ನತ ನಾಗರಿಕ ಪ್ರಶಸ್ತಿ ಕೂಡ ದೊರೆಯುತ್ತದೆ. ಯುದ್ಧವನ್ನು ಸೇನೆ ಹಾಗೂ ಹಿರಿಯ ನಾಯಕರು ತೀರ್ಮಾನಿಸುತ್ತಾರೆ. ಈ ಸಮಯದಲ್ಲಿ ಈ ರೀತಿ ಹೇಳಿಕೆ ನೀಡಬಾರದು ಎಂದರು.

ರೈಲ್ವೆ ಇಲಾಖೆಯ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಯಬೇಕು ಎಂಬ ಸೂಚನೆ ಬಂದಿದೆ ಎಂಬ ಮಾಹಿತಿ ಇದೆ. ಈ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಬಳಿ ಚರ್ಚಿಸಿದ್ದು, ಈ ರೀತಿ ನಿಯಮ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]