ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

Victory against Delhi... RCB tops the table

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]