Law to regulate YouTube channels: Dr. G. Parameshwar

ಎಎಸ್‌ಪಿ ಮೇಲೆ ಕೈ ಎತ್ತಿದ ಸಿಎಂ; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದು ಹೀಗೆ

ಬೆಂಗಳೂರು: ಬೆಳಗಾವಿಯಲ್ಲಿ ನಿನ್ನೆ ನಡೆದ ಘಟನೆ ಬಗ್ಗೆ ಪೂರ್ಣ ಮಾಹಿತಿ ತೆಗೆದುಕೊಂಡು ಪ್ರತಿಕ್ರಿಯಿಸುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ (Dr.G.Parameshwar) ಅವರು ಹೇಳಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎಎಸ್‌ಪಿ ಮೇಲೆ ಮುಖ್ಯಮಂತ್ರಿಗಳು ಕೈ ಮಾಡಲು ಹೋಗಿರುವುದು ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗುತ್ತಿರುವ ಕುರಿತು‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

ನನಗೆ ಸಂಪೂರ್ಣವಾದಂತ ಮಾಹಿತಿ ಇಲ್ಲ. ನಡೆದಿರುವ ಘಟನೆ ಏನು? ಯಾತಕ್ಕೆ ಕೋಪಗೊಂಡರು ಎಂಬುದು ಸರಿಯಾದ ಮಾಹಿತಿ ತೆಗೆದುಕೊಂಡಿಲ್ಲ. ಪೂರ್ಣ ಮಾಹಿತಿ ತೆಗೆದುಕೊಂಡ ಬಳಿಕ ನಾನು ಪ್ರತಿಕ್ರಿಯೆ ಮಾಡುತ್ತೇನೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾದ ಐದಾರು ಜನ ಕಾಂಗ್ರೆಸ್ ಶಾಲುಗಳನ್ನು ಹಾಕಿಕೊಂಡು ಕಾರ್ಯಕ್ರಮಕ್ಕೆ ಒಳಗೆ ಹೋಗಿದ್ದರು. ನಂತರ ಅವರು ಎಲ್ಲರು ಮಾತಾಡುವಾಗ ಏನು ಮಾಡಿಲ್ಲ. ಮುಖ್ಯಮಂತ್ರಿಯವರು ಮಾತಾಡುವಾಗ ಕಪ್ಪು ಭಾವುಟ ಪ್ರದರ್ಶಿಸಿದ್ದಾರೆ. ಈ ವೇಳೆ ಲೋಪ ಇಲಾಖೆಯಿಂದ ಆಗಿದೆಯಾ ಎಂಬುದರ ಬಗ್ಗೆ ಮಾಹಿತಿ ನೀಡುವಂತೆ ಕಾನೂನು ಸುವ್ಯವಸ್ಥೆ ಎಡಿಜಿಪಿಯವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಘಟನೆ ಭದ್ರತಾ ವೈಫಲ್ಯ ಎನ್ನುವುದಾದರೆ ಬಿಜೆಪಿಯವರು ಕಾಂಗ್ರೆಸ್ ಶಾಲು ಯಾಕೆ ಹಾಕಿಕೊಂಡು ಬಂದರು. ಬಿಜೆಪಿ ಶಾಲು ಹಾಕಿಕೊಂಡು ಬರಬಹುದಿತ್ತಲ್ಲವೇ? ಬಿಜೆಪಿ ಶಾಲು ಹಾಕಿಕೊಂಡು ಬಂದಿದ್ದರೆ ಭದ್ರತಾ ವೈಫಲ್ಯವೇ ಅಥವಾ ಏನು ಎಂಬುದು ಗೊತ್ತಾಗುತ್ತಿತ್ತು. ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಬರುವುದಕ್ಕೆ ಇವರಿಗೆ ಏನು ನೈತಿಕತೆ ಇತ್ತೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

ಯುದ್ಧ ಬೇಡ ಹೇಳಿಕೆಗೆ ಸಿಎಂ ಕ್ಷಮೆಯಾಚಿಸಬೇಕು ಎಂಬ ಬಿಜೆಪಿ ಒತ್ತಾಯದ ಕುರಿತು ಪ್ರತಿಕ್ರಿಯಿಸಿ,
ಯಾವ ಉದ್ದೇಶಕ್ಕಾಗಿ ಆ ರೀತಿ ಹೇಳಿದ್ದೇನೆ ಎಂಬುದರ ಕುರಿತು ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದಾರೆ. ಅಗತ್ಯ ಬಿದ್ದಾಗ ಯುದ್ಧ ಮಾಡಲು ಹಿಂದೆ ನೋಡಬಾರದು ಎಂಬುದನ್ನು ಹೇಳಿದ್ದಾರೆ ಎಂದರು.

ಪಹಲ್ಗಾಮ್ ಘಟನೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಮೃದು ಧೋರಣೆ ತೋರುತ್ತಿದ್ದಾರೆ ಎಂಬುದರ ಕುರಿತ ಮಾಧ್ಯದಮವರ ಪ್ರಶ್ನೆಗೆ, ದೇಶದ ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮಾಡಿರುವಂತ ತ್ಯಾಗವನ್ನು ಇನ್ನ್ಯಾರು ಕೂಡ ಮಾಡಲು ಸಾಧ್ಯವಿಲ್ಲ. ಅಷ್ಟು ತ್ಯಾಗ, ಬಲಿದಾನ ದೇಶದ ಭದ್ರತೆಗೆ ಕಾಂಗ್ರೆಸ್ ಪಕ್ಷ ಮಾಡಿದೆ. ಈ ವಿಚಾರದಲ್ಲಿ ನಾವು ಯಾರ ಹತ್ತಿರನು ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ.‌ ಮೃದುದೋರಣೆ ತೋರಿಸ್ತಾರೆ ಎಂದರೆ, ದೇಶದಲ್ಲಿ ಅಭದ್ರತೆ ಇರಲಿ ಎಂದು ಬಿಟ್ಟುಬಿಡುತ್ತೇವೆಯೇ? ಎಂದರು.

ದೇಶದ ಭದ್ರತೆ ಕಾಪಾಡುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಹೆಚ್ಚಿನಂಶ ಯಾರು ಅಧಿಕಾರದಲ್ಲಿರುತ್ತಾರೆ, ಅವರು ತೀರ್ಮಾನಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶವಿರುತ್ತದೆ. ನಮಗೆಲ್ಲರಿಗೂ ಕೂಡ ಜವಾಬ್ಧಾರಿ ಇರಬೇಕಾಗುತ್ತದೆ. ದೆಹಲಿಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷರು, ನಮ್ಮ ಪಕ್ಷದ ಪ್ರತಿನಿಧಿಗಳು ಕೂಡ ಘಟನೆಯನ್ನು ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಪಹಲ್ಗಾಮ್ ಘಟನೆಯ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಾನೊಂದು ಹೇಳುವುದು, ಇನ್ನೊಬ್ಬರೊಂದು ಹೇಳುವುದು ಬಾಯಿಗೆ ಬಂದಂತೆ ಹೇಳುತ್ತ ಹೋದರೆ ಮಹತ್ವ ಹೋಗುತ್ತದೆ. ನಾವು ಯಾರು ಕೂಡ ಹೆಚ್ಚು ಪ್ರತಿಕ್ರಿಯೆ ಮಾಡುವುದು ಸೂಕ್ತವಲ್ಲ ಎಂದರು.

ಈ ಬಗ್ಗೆ ಹೈಕಮಾಂಡ್ ಎಚ್ಚರಿಕೆ ನೀಡಿರುವ ವಿಚಾರ ಗೊತ್ತಿಲ್ಲ. ಇದು ದೇಶದ ಭದ್ರತೆ ವಿಚಾರ. ಪಕ್ಷಾತೀತವಾಗಿ ಈ ಘಟನೆಯನ್ನು ನೋಡಬೇಕು. ಪಕ್ಷಾತೀತವಾಗಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹಿಂದೆಯೇ ಹೇಳಿದ್ದೇನೆ. ದೇಶದ ಭದ್ರತೆಗೆ ಕೇಂದ್ರ ಸರ್ಕಾರ ಏನೇ ತೀರ್ಮಾನ ತೆಗೆದುಕೊಂಡರು ನಮ್ಮ ಸಹಕಾರ ಇದೆ. ಭದ್ರತೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರಲಿದೆ ಎಂಬುದನ್ನು ಎಐಸಿಸಿ ಅಧಿಕೃತವಾಗಿ ಹೇಳಿದೆ ಎಂದು Dr.G.Parameshwar ಸ್ಪಷ್ಟಪಡಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!