ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (Shri Kshetra Dharmasthala Village Development Scheme) ವತಿಯಿಂದ ಕಸಬಾ ವಲಯದ ಇಸ್ಲಾಂಪುರದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮೊಹಮ್ಮದ್ ಸಿದ್ದಿಕ್ (Mohammed Siddique) ಅವರಿಗೆ ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮದಡಿಯಲ್ಲಿ ರೂ.20 ಸಾವಿರ ಸಹಾಯಧನ ಮಂಜೂರಾಗಿದೆ
ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ದಿನೇಶ್ (Dinesh) ಚೆಕ್ನ್ನು ಮೊಹಮ್ಮದ್ ಸಿದ್ದಿಕ್ ಅವರಿಗೆ ಹಸ್ತಾಂತರ ಮಾಡಿದರು.
ಈ ವೇಳೆ ದರ್ಗಾಜೋಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಶಿಕಲಾ, ನಗರ ಸಭೆಯ ಸದಸ್ಯೆ ಪ್ರಭಾ ನಾಗರಾಜ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಮೇಲ್ವಿಚಾರಕಿ ಶಶಿಕಲಾ, ಸೇರಿದಂತೆ ಸೇವಾಪ್ರತಿನಿಧಿಗಳು, ಸಂಘದ ಸದಸ್ಯರು ಇದ್ದರು.