ದೊಡ್ಡಬಳ್ಳಾಪುರ: ಅಪರಿಚಿತ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ ಕೂಲಿ ಕಾರ್ಮಿಕ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಗರದ ಎಪಿಎಂಸಿ ಮುಂಭಾಗ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿಯನ್ನು ತೇರಿನಬೀದಿ ನಿವಾಸಿ 30 ವರ್ಷದ ರಾಜು ಎಂದು ಗುರುತಿಸಲಾಗಿದೆ.
ಎಪಿಎಂಸಿ ಆವರಣದಲ್ಲಿ ಕೂಲಿ ಕೆಲಸ ಮಾಡುವ ರಾಜು ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಎಪಿಎಂಸಿ ಮುಂಭಾಗದ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಇನ್ನೂ ಘಟನೆಯಲ್ಲಿ ಗಾಯಗೊಂಡು ಬಿದ್ದಿದ್ದ ರಾಜುವನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.