CM Siddaramaiah calls meeting of DC, CEO and District In-charge Secretary

ಜಾತಿಗಣತಿಗೆ ಮುಂದಾದ ಕೇಂದ್ರ; Cmsiddaramaiah ಆಗ್ರಹವೇನು.?

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಕೇಂದ್ರ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಆಗ್ರಹಿಸಿದ್ದಾರೆ.

ಈ ಕುರಿತಂತೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೆ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ.

ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶವಾಗಿದೆ. ಪ್ರತಿ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ.

ನಾನು ಧರ್ಮಸಿಂಗ್ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ರಚಿಸಿ ಜಾತಿಯ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದ್ದೆ. ಕಾರಣಾಂತರಗಳಿಂದ ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರಲು ಮತ್ತೆ ನಾನು ರಾಜ್ಯದ ಮುಖ್ಯಮಂತ್ರಿ ಆಗಬೇಕಾಯಿತು.

ಜಾತಿ ಗಣತಿ ಜೊತೆಯಲ್ಲಿ ಮೀಸಲಾತಿ ಮಿತಿ ಏರಿಕೆಯ ನಿರ್ಧಾರವನ್ನು ಸಂಪೂರ್ಣ ಬೆಂಬಲಿಸಿ ಅದನ್ನು ನಮ್ಮ ಪಕ್ಷದ ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ರೂಪಿಸಿ ದೇಶಾದ್ಯಂತ ಪ್ರಚಾರ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ. ಅವರ ಅವಿರತ ಪ್ರಯತ್ನದ ಒತ್ತಡದಿಂದಾಗಿಯೇ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಗಣತಿ ನಡೆಸುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನುವುದನ್ನು ಅವರು ಒಪ್ಪಿಕೊಳದೆ ಇರಬಹುದು, ಆದರೆ ದೇಶ ಖಂಡಿತಾ ಒಪ್ಪುತ್ತದೆ.

ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಭಾರತೀಯ ಜನತಾ ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ.

ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಜಾತಿ ಎನ್ನುವುದು ವಾಸ್ತವ. ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ಜಾತಿ ಎನ್ನುವ ವಾಸ್ತವವನ್ನು ಒಪ್ಪಿಕೊಳ್ಳುವ ಮೂಲಕವೇ ಅದರ ನಾಶಕ್ಕೆ ಪ್ರಯತ್ನಿಸಬೇಕಾಗಿದೆ. ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸುವ ಮೂಲಕವೇ ಜಾತಿನಾಶ ಸಾಧ್ಯ ಎಂದು ನಾನುಬಲವಾಗಿ ನಂಬಿದವನು.

ಕರ್ನಾಟಕದಲ್ಲಿ ನಾವು ನಡೆಸಿದ್ದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ಧ ಇದೆ. ಇದನ್ನು ಬಿಜೆಪಿಯ ರಾಜ್ಯ ಘಟಕ ನಾನಾ ಸಬೂಬುಗಳನ್ನು ಮುಂದೊಡ್ಡಿ ವಿರೋಧಿಸುತ್ತಿದೆ.

ಈ ಸಮೀಕ್ಷೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿಯನ್ನು ಪರಿಷ್ಕರಿಸಿ ಈಗಿನ ಶೇಕಡಾ 50ರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಈ ಎಲ್ಲ ಪ್ರಯತ್ನಗಳಿಗೆ ಅಡ್ಡಗಾಲು ಹಾಕುತ್ತಿರುವ ಬಿಜೆಪಿಯ ರಾಜ್ಯಘಟಕದ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಹಿಂಡಿ ಬುದ್ದಿ ಹೇಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.

ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ.

ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು Cmsiddaramaiah ಹೇಳಿದ್ದಾರೆ.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!