ದೊಡ್ಡಬಳ್ಳಾಪುರ; ಕಸಾಪದಿಂದ ಬಸವ ಜಯಂತಿ ಆಚರಣೆ

Doddaballapura; Basava Jayanti celebrated by Kasapa

ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು (Basavanna) ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಬಸವ ಜಯಂತಿ   ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ. ಬಸವಾದಿಶರಣರ ಚಿಂತನೆಗಳು ಭಾರತದ ಸಂವಿಧಾನದ ಆಶಯಗಳಿಗೆ ಪ್ರೇರಣೆಯಾಗಿವೆ ಎಂದರು.

ಶಿಕ್ಷಕ ಕೋದಂಡರಾಮ್ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಬಸವಣ್ಣನವರ ಕೊಡುಗೆ ಅಪಾರವಾಗಿದೆ. ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆ ವಚನ ಸಾಹಿತ್ಯವಾಗಿದೆ. ಬಸವಣ್ಣ ಅವರ ನೇತೃತ್ವದಲ್ಲಿ ವಚನಕಾರರು ತಮ್ಮ‌ ವಚನಗಳಲ್ಲಿ ಸಾಮಾಜಿಕ, ಹಾಗೂ ತಾತ್ವಿಕ ಮೌಲ್ಯಗಳನ್ನು ಪ್ರತಿಪಾದಿಸಿದರು.

ವಿಶ್ವ ಮಾನವತೆ ಮತ್ತು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕರಾಗಿದ್ದಾರೆ ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ಮಾತನಾಡಿ, ಬಸವಣ್ಣನವರು ವಚನಗಳ ಮೂಲಕ ಸಾಮಾಜಿಕ ಅರಿವು ನೀಡಿದರು. ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದ ಬಸವಣ್ಣನವರಿಗೆ ಸಮ ಸಮಾಜವನ್ನು ಕಟ್ಟುವ ಮುಖ್ಯ ಗುರಿ ಹೊಂದಿದ್ದರು. ಬಸವಣ್ಣನವರು ಕಟ್ಟಿದ ಜಾತ್ಯತೀತವಾದ ಸರ್ವಸಮಾನತೆಯ ವ್ಯವಸ್ಥೆಯನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ ಎಂಬುದು ವಿಷಾದೀಯ ಸಂಗತಿಯಾಗಿದೆ.

ಬಸವಣ್ಣನವರ ಆದರ್ಶಗಳನ್ನು, ಅವರ ವಚನಗಳ ವಿಚಾರಧಾರೆಯನ್ನು ಜನರು ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಉಂಟು ಮಾಡಲು ಸಾಧ್ಯವೆಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್.

ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್,  ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಪ್ರತಿನಿಧಿ ಷಫೀರ್,  ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]