ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಗುರು ಜಗಜ್ಯೋತಿ ಬಸವಣ್ಣನವರ (Basavanna) ಜಯಂತಿ ಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿಕಲಚೇತನರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಗದೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.