Making money is not the purpose of the legal profession: Cmsiddaramaiah

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಜಾಪ್ರಭುತ್ವದ ಸಂಸ್ಥೆಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಸಮಾಜದ ಸಮ ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕಾನೂನು ಬಲ್ಲ ವಕೀಲರ ಜವಾಬ್ದಾರಿ ಹೆಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಮಂಗಳವಾರ ಸಂಜೆ ವಕೀಲರ ಸಂಘದ ವತಿಯಿಂದ ಏರ್ಪಡಿಸಿದ್ದ ವಾರ್ಷಿಕ ದಿನಾಚರಣೆ ಉದ್ಘಾಟಿಸಿ ಹಾಗೂ ವಕೀಲರ ವೇದಿಕೆ ಯ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೂಡಿಸಬೇಕು. ಯಾವುದೇ ಕಾರಣಕ್ಕೂ ಅನ್ಯಾಯದ ಪರ ನಿಲ್ಲಬಾರದು. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಕೀಲರು ಪ್ರಯತ್ನ ಮಾಡಬೇಕು ಎಂದರು.

ವಕೀಲರಿಗೆ ರಕ್ಷಣಾ ಕಾಯ್ದೆ: ಶಾಸಕಾಂಗದ ಪ್ರಯತ್ನ

‘ವಕೀಲರ ರಕ್ಷಣಾ ಕಾಯ್ದೆ ಬಹು ದಿನಗಳಿಂದ ಬೇಡಿಕೆಯಲ್ಲಿ ಇದ್ದಂತ
ವಿಚಾರ. ವಕೀಲರಿಗೆ ರಕ್ಷಣೆ ಅಗತ್ಯವಿದ್ದು, ಅದಕ್ಕೊಂದು ಕಾನೂನಿನ ಚೌಕಟ್ಟನ್ನು ಒದಗಿಸಿಕೊಡಲು ಶಾಸಕಾಂಗ ಪ್ರಯತ್ನ ಮಾಡಿದ್ದು, ಅದರ ಫಲಶ್ರುತಿಯಾಗಿಯೇ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬಂದಿದೆ ಎಂದರು.

ಹಿಂದೆ ವಕೀಲರಿಗೆ ಭರವಸೆ ನೀಡಿದ್ದಂತೆ ಕಾಯ್ದೆ ರೂಪಿಸಿದ್ದೇವೆ. ಇಂದಿನ ದಿನಗಳಲ್ಲಿ ವಕೀಲರು ಬೆದರಿಕೆ, ಕಿರುಕುಳ, ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುವಂತಹ ಅನೇಕ ಆತಂಕಗಳನ್ನು ಎದುರಿಸುತ್ತಿದ್ದಾರೆ ‌. ಇದಕ್ಕೆಲ್ಲ ಕಡಿವಾಣ ಹಾಕಲು ಒಂದು ಕಾಯ್ದೆಯ ಅವಶ್ಯಕತೆ ಇದೆ.ಆ ಕಾಯ್ದೆ ಅತ್ಯಂತ ಅವಶ್ಯ ಎಂದು ಮನಗಂಡು ವಿಧಾನಸಭೆ, ಪರಿಷತ್ ಎರಡೂ ಕಡೆ ಮಂಡಿಸಿ ಅಂಗೀಕಾರವಾಗಿ ರಾಜ್ಯಪಾಲರ ಅಂಕಿತ ಪಡೆದು ಈಗ ಕಾಯ್ದೆಯಾಗಿದೆ. ಈ ಕಾಯ್ದೆ ಯಿಂದಾಗಿ ವಕೀಲರಿಗೆ ರಕ್ಷಣೆ ಸಿಕ್ಕಿದೆ. ಕಾಯ್ದೆಯಿಂದ
ಕೇವಲ ನಿಮ್ಮ ರಕ್ಷಣೆ ಆದರೆ ಸಾಲದು ನಾಡಿನ ಜನರ, ನ್ಯಾಯ ಕೇಳಿ ಬರುವವರ ರಕ್ಷಣೆ ಆಗಬೇಕು ಎಂದರು.

ಸಂವಿಧಾನ ಓದಿ, ಪಾಲಿಸಿ

ಕೇವಲ ಸಂವಿಧಾನ ಪರಿಣಿತರೇ ಸಂವಿಧಾನವನ್ನು ಓದಬೇಕೆಂದೇನೂ ಇಲ್ಲ. ಆ ಭಾವನೆ ಬಿಟ್ಟು ವಕೀಲ ವೃತ್ತಿಯಲ್ಲಿ ಇರುವ ಎಲ್ಲರೂ, ಪ್ರತಿಯೊಬ್ಬರೂ ಸಂವಿಧಾನದ ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ಪಾಲಿಸಬೇಕು. ನಮ್ಮದು ಅತ್ಯಂತ ಶ್ರೇಷ್ಠ ಸಂವಿಧಾನ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ, ನಮ್ಮ ಸಮಾಜಕ್ಕೆ ಅನುಗುಣವಾದ ಸಂವಿಧಾನ ರಚಿಸಿಕೊಟ್ಟಿದ್ದಾರೆ ಎಂದರು.

ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ

ನ್ಯಾಯ ಪಡೆಯುವುದು ಈಗ ದುಬಾರಿಯಾಗಿದ್ದು, ಅನೇಕರಿಗೆ ಹಣವಿಲ್ಲದೆ ನ್ಯಾಯ ಪಡೆಯಲು ಸಾಧ್ಯವಾಗುತ್ತಿಲ್ಲ. ಅಂಥವರಿಗೆ ಅನ್ಯಾಯವಾಗುತ್ತದೆ. ಹಣ ಮಾಡುವುದು ವಕೀಲ ವೃತ್ತಿಯ ಉದ್ದೇಶವಲ್ಲ ನ್ಯಾಯ ಕೊಡಿಸುವುದು ಉದ್ದೇಶವಾಗಬೇಕು.

ತ್ವರಿತವಾಗಿ ನ್ಯಾಯ ಸಿಗುವ ರೀತಿ ಮಾಡಬೇಕು. ನ್ಯಾಯ ವಿಳಂಬವಾದರೆ, ನ್ಯಾಯವನ್ನು ನಿರಾಕರಿಸಿದಂತೆ ಎಂಬ ಮಾತನ್ನು ನೆನಪಿಡಬೇಕು. ಇದು ವಕೀಲರ ದಿನನಿತ್ಯದ ಮಂತ್ರವಾಗಬೇಕು. ವಕೀಲರು ಮನಸ್ಸು ಮಾಡಿದರೆ ವಿಳಂಬವಾಗುವುದನ್ನು ತಪ್ಪಿಸಬಹುದು ಎಂದರು.

ಪ್ರಕರಣಗಳನ್ನು ವರ್ಷಾನುಗಟ್ಟಲೆ ಎಳೆಯಬಾರದು

ಸತ್ಯ, ಸತ್ವ, ಸಾಕ್ಷ್ಯಾಧಾರಗಳಿಲ್ಲದ ಪ್ರಕರಣಗಳನ್ನು ವರ್ಷಾನುಗಟ್ಟಲೆ ಎಳೆಯಬಾರದು ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು. ಅಶಕ್ತರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಬೇಕು. ಕಕ್ಷಿದಾರರ ಆರ್ಥಿಕ, ಸಾಮಾಜಿಕ ಪರಿಸ್ಥಿತಿ ನೋಡಿಕೊಂಡು ಶುಲ್ಕ ಪಡೆಯಬೇಕೆಂದರು. ನ್ಯಾಯ ಕೊಡಿಸುವ ಕೆಲಸವನ್ನು ಮಾಡಲೇಬೇಕು ಎಂದರು.

ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು

ಸರ್ಕಾರಿ ವಕೀಲರು ಹೆಚ್ಚು ಮಾತನಾಡುವುದಿಲ್ಲ ಎಂಬ ಆರೋಪವಿದೆ. ಪ್ರಕರಣವನ್ನು ಚೆನ್ನಾಗಿ ಓದಿ, ಸರಿಯಾದ ರೀತಿಯಲ್ಲಿ ನ್ಯಾಯಾಧೀಶರ ಮುಂದೆ ವಿಷಯ ಮಂಡಿಸಬೇಕು ಹಾಗು ಕಕ್ಷಿದಾರರ ಹಕ್ಕನ್ನು ರಕ್ಷಿಸಬೇಕು ಎಂದರು.

ಬೆಂಗಳೂರಿನ ವಕೀಲರ ಸಂಘ ಏಷ್ಯಾ ಖಂಡದಲ್ಲೇ ಅತ್ಯಂತ ದೊಡ್ಡ ಸಂಘವಾಗಿದ್ದು 25 ಸಾವಿರ ಸದಸ್ಯರನ್ನು ಹೊಂದಿರುವುದು ಸಣ್ಣ ಸಂಗತಿಯೇನಲ್ಲ ಎಂದರು.

ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ

ವಕೀಲ ಸಂಘದವರು ಸಲ್ಲಿಸಿರುವ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ನಿಧಿಗೆ ಅನುದಾನವನ್ನು ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿಗಳು ಸರ್ವೋಚ್ಚ ನ್ಯಾಯಾಲಯ ಪೀಠದ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಬೇಸಿಗೆ ರಜೆಗೆ ಹಾರೈಕೆ

ಪ್ರತಿನಿತ್ಯ ಕೋರ್ಟ್ ಕಲಾಪಗಳಲ್ಲೇ ತೊಡಗಿರುವ ವಕೀಲರಿಗೆ ಬೇಸಿಗೆ ರಜೆ ಸಂಜೀವಿನಿಯಂತೆ‌. ಮೇ 2ರಿಂದ ಶುರುವಾಗುವ ಬೇಸಿಗೆ ರಜೆ ಕುಟುಂಬದೊಡನೆ ಸುಖಕರವಾಗಿ ಕಳೆಯಿರಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!