SSLC Result; Poor performance of Doddaballapur taluk

ಮೇ 4 ರಂದು NEET(UG) 2025ರ ಪರೀಕ್ಷೆ: ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ

ಬೆಂಗಳೂರು: ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು.

ಬೆಳಿಗ್ಗೆ 11.00 ಗಂಟೆಯಿಂದ NTA ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು.

ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ/ ದೊಡ್ಡ ಬಟನ್ ಗಳಿರುವ ಶರ್ಟ್ /ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲ್ಗೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ.

ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.

ಮಧ್ಯಾಹ್ನ 2.00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು.

ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗಿರುತ್ತದೆ.

NTA ವತಿಯಿಂದ Frisking ಮತ್ತು JAMMER ಅಳವಡಿಸಲು, ಏಜೆನ್ಸಿರವರನ್ನು ನಿಯೋಜಿಸಿದ್ದು, ಪರೀಕ್ಷಾ ಕೇಂದ್ರಕ್ಕೆ, JAMMER ಅಳವಡಿಕೆ ಮತ್ತು Frisking ಮಾಡುತ್ತಿರುವ ಬಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು.

ಪ್ರತಿ ಪದೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!