Jagajyoti Basaveshwara

ಪ್ರಧಾನಿ ಮೋದಿ ಆಧುನಿಕ ಪ್ರಪಂಚದ ಬಸವಣ್ಣ: ಕೇಂದ್ರ ಸಚಿವ ವಿ.ಸೋಮಣ್ಣ ಬಣ್ಣನೆ

ನವದೆಹಲಿ: ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ (Jagajyoti Basavanna )894ನೇ ಜಯಂತಿಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮುಖೇನ ಆಯೋಜಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ.

ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ಆಹ್ವಾನಿಸಿದ್ದರು.

ಕಾರ್ಯಕ್ರಮದ ಆಯೋಜನೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾರವರು ಅನುಮತಿ ನೀಡಿ ಬಸವೇಶ್ವರರ ಪುತ್ಥಳಿಗೆ ಅಪಾರ ಗೌರವ ಸಲ್ಲಿಸಲು ಕಾರಣಿಕರ್ತರಾಗಿದ್ದಾರೆಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣನವರು, ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕಲ್ಪನೆಯನ್ನು ಜಗತ್ತಿಗೆ ತೋರಿಸಿದವರು ಬಸವಣ್ಣನವರು, ಕಾಯಕವೇ ಕೈಲಾಸ ಎಂಬ ತತ್ವದೊಂದಿಗೆ ಆರೋಗ್ಯವಂತ ಸಮಾಜಕ್ಕೆ ಅಡಿಪಾಯ ಹಾಕಿದವರು ಶ್ರೀ ಬಸವೇಶ್ವರರು ಎಂದಿದ್ದಾರೆ.

ಬಸವಣ್ಣನವರ ಸಾರಥ್ಯದಲ್ಲಿ ನಡೆದ ಸುಧಾರಣೆಯ ಪ್ರಯತ್ನ ಒಂದು ಸಾಮಾಜಿಕ ಚಳವಳಿಯಾಗಿ ರೂಪುಗೊಂಡಿತ್ತು. ಸಾಮಾನ್ಯ ಬದುಕಿನ ಎಲ್ಲಾ ಸ್ಥರಗಳು ಆ ಚಳುವಳಿಯ ಒಂದು ಭಾಗವಾದ್ದದ್ದು ಶರಣರ ಪೂರ್ಣ ದೃಷ್ಟಿಯ ಸಂಕೇತ ಎಂದು ಮಾದ್ಯಮಕ್ಕೆ ತಿಳಿಸಿದ್ದಾರೆ.

ಬಸವಣ್ಣನವರು ವಿದ್ಯೆಯೆಂಬ ಆಯುಧವನ್ನು ಸಮಾಜದ ಎಲ್ಲಾ ವರ್ಗದ ಹಿಂದುಳಿದವರ, ಶೋಷಿತ ವರ್ಗದ ಹಾಗೂ ಮಹಿಳೆಯರ ಉದ್ಧಾರಕ್ಕಾಗಿ ತೊಡಗಿಸಿಕೊಂಡಿದ್ದರು. ಜೀವನದ ಸತ್ಯತೆಗಳನ್ನು ಸಾಮಾನ್ಯರಿಗೆ ತಲುಪಿಸುವಲ್ಲಿ ಬಸವಣ್ಣನವರ ವಚನಗಳು ಬಹು ಮುಖ್ಯ ಪಾತ್ರ ವಹಿಸಿದೆ ಎಂದು ಸೋಮಣ್ಣ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಇಂದು ಮಾತನಾಡಿದ್ದಾರೆ.

ಬಸವಣ್ಣನವರ ಅನುಭವ ಮಂಟಪ ಸಮಾಜದ ಎಲ್ಲಾ ವರ್ಗಗಳ ಪ್ರತಿನಿಧಿತ್ವದೊಂದಿಗೆ ಲಿಂಗಬೇದ ರಹಿತ ಸಮಾನತೆಯೊಂದಿಗೆ ಅಭಿವ್ಯಕ್ತಿ ಸ್ವಾತಂತ್ಯದ ವೇದಿಕೆಯಾಗಿತ್ತು. ಅನುಭವ ಮಂಟಪದ ಆ ವೇದಿಕೆಯೆ ಇಂದಿನ ನಮ್ಮ ಮುಂದಿರುವ ಸಂಸತ್ತು ಎಂದು ವಿ. ಸೋಮಣ್ಣ ಪುನರುಚ್ಚರಿಸಿದ್ದಾರೆ.

ಇಂಗ್ಲೆಡ್‌ನಲ್ಲಿ ಮ್ಯಾಗ್ನಾ ಕಾರ್ಟರ ಪರಿಕಲ್ಪನೆಯ ಸಂಸತ್ತು ಜಾರಿಗೆ ಬರುವ ಮೊದಲೇ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಬಸವಣ್ಣನವರು ಸಂಸತ್ತಿನ ಪರಿಕಲ್ಪನೆ ಸೃಷ್ಟಿಸಿದ್ದು – ಅನುಭವ ಮಂಟಪ ರೂವಾರಿಯಾಗಿದ್ದರು ಎಂದು ಅನುಭವ ಮಂಟಪದ ಹಿರಿಮೆ ಗರಿಮೆಯನ್ನು ಇಂದು ಸೋಮಣ್ಣ ಸಂಸತ್ತಿನಲ್ಲಿ ಆವರಣದಲ್ಲಿ ಕೊಂಡಾಡಿದ್ದಾರೆ.

ಬಸವಣ್ಣನವರ ಕಾಯಕ ತತ್ವದ ಪ್ರತಿಪಾದನೆಯಲ್ಲಿಯೇ ಪ್ರಧಾನ ಮಂತ್ರಿ ನರೇಂದ್ರಮೋದಿಯವರು ಈ ದೇಶವನ್ನು ಮುನ್ನೆಡಿಸುತ್ತಿದ್ದಾರೆ.

ಬಸವಣ್ಣನವರು 12ನೇ ಶತಮಾನದಲ್ಲಿ; ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ – ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ ಎಂಬ ಸೂತ್ರವನ್ನು ಜಗಜ್ಯೋತಿ ಬಸವಣ್ಣನವರು ಜಗತ್ತಿಗೆ ಪರಿಚಯಿಸಿದ್ರು.

ಇಂದು 21ನೇ ಶತಮಾನದಲ್ಲಿ ಇದೇ ತತ್ವದಡಿಯಲ್ಲಿ ಕಾಯಕ ಮಾಡುತ್ತಿದ್ದಾರೆ ಆಧುನಿಕ ಜಗತ್ತಿನ ಅಭಿವೃದ್ದಿಯ ಹರಿಕಾರ, ಕಾಯಕಯೋಗಿ ಪ್ರದಾನಿ ಮೋದಿಯವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ದೇಶ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಪ್ರಬಲ ರಾಷ್ಟçವಾಗಬೇಕೆಂಬ ಹಂಬಲದಿAದ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್, ಎಂಬ ಧ್ಯೇಯ ಮಂತ್ರದೊಂದಿಗೆ ಪ್ರಧಾನಿ ಮೋದಿಯವರು ಈ ದೇಶವನ್ನು ಮುನ್ನೇಡುಸುತ್ತಿದ್ದಾರೆ ಮೋದಿಯವರು ಆಧುನಿಕ ಭಾರತದ “ಕಾಯಕಯೋಗಿ ಬಸವಣ್ಣ” ಎಂದರೆ ತಪ್ಪಾಗಲಾರದು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ನವದೆಹಲಿಯಲ್ಲಿ ಬಸವಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಜಗಜ್ಯೋತಿ ಬಸವಣ್ಣನವರ 894ನೇ ಜಯಂತಿಯನ್ನು ಸಂಸತ್ತಿನ ಆವರಣದಲ್ಲಿ ಅಚರಿಸಲು ಸನ್ಮಾನ್ಯ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಅನುಮತಿಯನ್ನು ನೀಡಿದ್ದಾರೆ.
ಬಸವಮೂರ್ತಿ ಸಂಸತ್ತಿನ ಆವರಣದಲ್ಲಿ ಸ್ಥಾಪನೆಯಾಗಿ ಸುಮಾರು 22 ವರ್ಷಗಳ ನಂತರ ಇಂತಹ ಜಯಂತಿಯ ಕಾರ್ಯಕ್ರಮವನ್ನು ಆಯೋಜಿಸಿಲು ಅವಕಾಶ ಸಿಕ್ಕಿದೆ. ಇದು ಕನ್ನಡ ನಾಡಿನ ಸಮಸ್ತ ಜನತೆಗೆ ಸಂಸತ್ತಿನ ಮುಖೇನ ಭಾರತ ಸರ್ಕಾರ ನೀಡಿದ ಮಹಾ ಗೌರವ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!