ಕೇಂದ್ರದ ಜಾತಿ ಜನಗಣತಿ: ಜಾತಿ ವಿಷಬೀಜ ಬಿತ್ತುವ ಕುತಂತ್ರಕ್ಕೆ ಇತಿಶ್ರೀ – ಬಿ.ವೈ.ವಿಜಯೇಂದ್ರ

Center's Caste Census: Itishree for Caste Poison Seed Ploy - BYVijayendra

ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರಕಾರ ಜಾತಿ ಜನಗಣತಿ (Caste census) ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರವು ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿ ಜನಗಣತಿ ಮಾಡುವ ಪ್ರಮುಖ ನಿರ್ಧಾರ ಮಾಡಿದ್ದು ಸ್ವಾಗತಾರ್ಹ ಎಂದರು.

ಭಾರತದಲ್ಲಿ 1931ರ ನಂತರ ಯಾವತ್ತೂ ಜಾತಿ ಜನಗಣತಿ ಆಗಿರಲಿಲ್ಲ; ಈ ದೇಶದ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಬೇಕು; ಎಲ್ಲ ಸಮುದಾಯಗಳಿಗೂ ಸವಲತ್ತು ಸಿಗಬೇಕೆಂಬುದೇ ನರೇಂದ್ರ ಮೋದಿಜೀ ಅವರ ಇಚ್ಛೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ಧ್ಯೇಯೋದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿಜೀ ಅವರು ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ಜನಗಣತಿ ಜೊತೆ ಜಾತಿ ಗಣತಿ ಮಾಡುವ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಆಡಳಿತ ನಡೆಸುವ ಕಾಂಗ್ರೆಸ್ ಪಕ್ಷವು ಜಾತಿ- ಜಾತಿಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕೇಂದ್ರದ ಈ ನಿರ್ಧಾರದಿಂದ ಅವರಿಗೂ ಆಶ್ಚರ್ಯವಾಗಿದೆ. ಕೇಂದ್ರದಲ್ಲಿ ಸ್ವಾತಂತ್ರ್ಯಾನಂತರ ಇಷ್ಟು ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷವು ಜಾತಿ ಜನಗಣತಿ ಕಾರ್ಯಕ್ಕೆ ಕೈ ಹಾಕಿರಲಿಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಜಾತಿಗಣತಿ ಕುರಿತಂತೆ ಮುಖ್ಯಮಂತ್ರಿಗಳೇ ಒಂದು ನಿರ್ಧಾರ ಕೈಗೊಂಡಿಲ್ಲ. ಹಿಂದಿನ ಅವಧಿಯಲ್ಲೇ ಹಿಂದುಳಿದ ಸಮುದಾಯಗಳ ಸಮೀಕ್ಷೆ ಕೈಗೊಂಡಿದ್ದು, ಈಗ ಜಾತಿ ಜನಗಣತಿ ಎಂದು ಅವರೇ ಹೇಳುತ್ತಿದ್ದಾರೆ. ರಾಜ್ಯ ಸರಕಾರಕ್ಕೆ ಜಾತಿ ಜನಗಣತಿ ಮಾಡುವ ಅವಕಾಶ ಇಲ್ಲ; ಕೇಂದ್ರ ಸರಕಾರಕ್ಕೆ ಮಾತ್ರ ಈ ಅಧಿಕಾರ ಇದೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಇದೆಲ್ಲ ಗೊತ್ತಿದ್ದು ಕೂಡ ಜಾತಿ ವಿಷಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿತ್ತು ಎಂದು ಆಕ್ಷೇಪಿಸಿದರು.

ರಾಜ್ಯದಲ್ಲಿ ಜಾತಿ ಜನಗಣತಿ ಮಾಡಿ 10 ವರ್ಷ ಕಳೆದಿದ್ದು, ಅವಧಿ ಮೀರಿದೆ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ವೀರಪ್ಪ ಮೊಯಿಲಿ ಅವರೇ ಹೇಳಿದ್ದರು. ಸರಕಾರದ ಬಳಿ ಕಾಂತರಾಜು ಅವರು ನೀಡಿದ್ದ ವರದಿಯೇ ಇಲ್ಲ; ವರದಿ ಇಲ್ಲದೇ ಇದ್ದರೂ ಸಮಾಜಗಳ ನಡುವೆ ಗೊಂದಲ ಸೃಷ್ಟಿಸಲು ಹಾಗೂ ಕಂದಕ ಸೃಷ್ಟಿ ಮಾಡುವ ಕೆಲಸವನ್ನು ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಮಾಡುತ್ತಿತ್ತು ಎಂದು ಟೀಕಿಸಿದರು. ಈಗಲಾದರೂ ಇದಕ್ಕೆ ಇತಿಶ್ರೀ ಹಾಡುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಎಲ್ಲ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಕೊಡಬೇಕು

ಆ ದೃಷ್ಟಿಕೋನದಿಂದಲೇ ಪ್ರಧಾನಿಯವರು ನಿರ್ಧಾರ ಮಾಡಿದ್ದಾರೆ. ಅದನ್ನು ಸಿದ್ದರಾಮಯ್ಯರಿಂದ ಕಲಿಯುವ ಅವಶ್ಯಕತೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯದಲ್ಲಿ ಜಾತಿಗಣತಿ ಕುರಿತು ಬೊಬ್ಬೆ ಹೊಡೆಯುತ್ತಿರುವ ಕಾಂಗ್ರೆಸ್ಸಿನವರ ಬಳಿ ಯಾವುದೇ ವರದಿ ಇಲ್ಲ ಎಂದರು.

ಕಾಂತರಾಜು ವರದಿಯ ಪ್ರತಿಯೇ ಇಲ್ಲ

ಜಯಪ್ರಕಾಶ್ ಹೆಗ್ಡೆ ಅವರು ಯಾವ ವರದಿ ಆಧಾರದ ಮೇಲೆ ವರದಿ ನೀಡಿದ್ದಾರೆ ಎಂದು ಪ್ರಶ್ನಿಸಿದರು. ಜಯಪ್ರಕಾಶ್ ಹೆಗ್ಡೆ ಅವರೇ ಸರಕಾರಕ್ಕೆ ಪತ್ರ ಬರೆದು ಮೂಲ ವರದಿ ಇಲ್ಲದೇ ಯಾವ ಆಧಾರದಲ್ಲಿ ವರದಿ ಕೊಡಬೇಕೆಂದು ಪ್ರಶ್ನಿಸಿದ್ದರು. ಸರ್ವೇಗೆ ಎಷ್ಟು ಕೋಟಿ ಖರ್ಚಾಗಿದೆ ಎಂದು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯನವರ ಸರಕಾರಕ್ಕೆ ಸದುದ್ದೇಶ ಇಲ್ಲ

ಸಮಾಜಗಳ ನಡುವೆ ಒಡಕನ್ನು ಸೃಷ್ಟಿಸುವ ದುರುದ್ದೇಶ ಬಿಟ್ಟಲ್ಲಿ ಯಾವುದೇ ಒಳ್ಳೆಯ ಉದ್ದೇಶ ಇಲ್ಲ ಎಂದು ನುಡಿದರು.

ಪೆಹಲ್ಗಾಂ ಭಯೋತ್ಪಾದಕರ ದಾಳಿ ವಿಷಯದಲ್ಲಿ ಪ್ರಚಾರದ ಹುಚ್ಚಿಗಾಗಿ ಕೆಲವರು ಹೇಳಿಕೆ ಕೊಡುತ್ತಿದ್ದಾರೆ. ಅದೆಲ್ಲಕ್ಕೂ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಪೆಹಲ್ಗಾಂ ದುರ್ಘಟನೆ ವಿಷಯದಲ್ಲಿ ಪ್ರತಿಯೊಬ್ಬ ಭಾರತೀಯರೂ ಒಂದಾಗಿದ್ದಾರೆ.

ಭಯೋತ್ಪಾದಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂಬ ಅಪೇಕ್ಷೆ ದೇಶದ ಜನತೆಯಲ್ಲಿದೆ ಎಂದು ಬಿ.ವೈ.ವಿಜಯೇಂದ್ರ (BY Vijayendra) ತಿಳಿಸಿದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!