Teachers are social ambassadors who shape society through children.

ಶಿಕ್ಷಕರು ಅಂದರೆ ಮಕ್ಕಳ ಮೂಲಕ ಸಮಾಜವನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್

ಬೆಂಗಳೂರು: ಶಿಕ್ಷಕರು (Teachers) ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ-ಸಮನ್ವಯತೆ-ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ‌ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ (KV Prabhakar) ನುಡಿದರು.

ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು (Teachers) ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ ತಿದ್ದಿ ಬೆಳೆದ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ವಂಧಿಸುವ ಮೂಲಕ ತಮ್ಮ ಸಂಸ್ಕಾರವನ್ನು ತೋರಿಸುತ್ತಿದ್ದಾರೆ.

ರೈತರು-ಶಿಕ್ಷಕರು-ಸೈನಿಕರು ಆರೋಗ್ಯಕರ ಮತ್ತು ನೆಮ್ಮದಿಯ ಸಮಾಜದ ಸೇನಾನಿಗಳು ಎಂದು ನಮ್ಮ ಮುಖ್ಯಮಂತ್ರಿಗಳು ಯಾವಾಗಲೂ ಹೇಳ್ತಾ ಇರ್ತಾರೆ. ಇದು ಅಕ್ಷರಶಃ ನಿಜ. ಇದಕ್ಕೆ ಸರ್ವಾಧಿಕಾರಿ ಹಿಟ್ಲರ್ ನ ಒಂದು ಪ್ರಸಂಗ ನೆನಪಿಸುತ್ತೇನೆ.

ಯುದ್ಧದಾಹಿಯಾಗಿದ್ದ ಹಿಟ್ಲರ್ ಯಾವುದೇ ಪ್ರದೇಶವನ್ನು, ದೇಶವನ್ನು ವಶಪಡಿಸಿಕೊಂಡಾಗ ಮೊದಲಿಗೆ ಆ ಪ್ರದೇಶದಲ್ಲಿರುವ ಶಿಕ್ಷಕರನ್ನು ಬಂಧಿಸಲು ತನ್ನ ಸೈನಕ್ಕೆ ಸೂಚಿಸುತ್ತಿದ್ದ. ಏಕೆಂದರೆ, ಶಿಕ್ಷಕರು ಮಕ್ಕಳು ಮತ್ತು ಸಮಾಜವನ್ನು ಬೇಗ ಪ್ರಭಾವಿಸುತ್ತಾರೆ, ತಮ್ಮ ಪ್ರಭಾವದಿಂದ ಹೋರಾಟಗಳನ್ನು ರೂಪಿಸುತ್ತಾರೆ ಎನ್ನುವ ತಿಳಿವಳಿಕೆ ಮತ್ತು ಭಯ ಎರಡೂ ಹಿಟ್ಲರ್ ಗೆ ಇತ್ತು.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೂ ಮಹಾತ್ಮಗಾಂಧಿಯವರ ವಿಚಾರಗಳಿಗೆ ಮೊದಲು ಪ್ರಭಾವಿತರಾಗಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದುಮುಕಿದವರು ಶಾಲಾ ಶಿಕ್ಷಕರೇ. ಇದಕ್ಕೆ ಮತ್ತೊಂದು ಉದಾಹರಣೆ ಹೇಳ್ತೇನೆ.

ಸಮಾಜವಾದಿ ಹೋರಾಟಗಾರರಾದ ಶಾಂತವೇರಿ ಗೋಪಾಲಗೌಡರು ತಮ್ಮ ಚಿಂತನೆಗಳನ್ನು, ಹೋರಾಟದ ವಿಷಯಗಳನ್ನು ಜನರಿಗೆ ಹೇಳುವ ಮೊದಲು ಶಾಲೆಗಳಿಗೆ ಹೋಗಿ ಶಿಕ್ಷಕರು (Teachers) ಮತ್ತು ಮಕ್ಕಳಿಗೆ ಹೇಳುತ್ತಿದ್ದರು. ಶಿಕ್ಷಕರು ಮತ್ತು ಮಕ್ಕಳು ಒಟ್ಟಾಗಿ ಪೋಷಕರಿಗೆ ವಿಷಯ ಮುಟ್ಟಿಸುತ್ತಿದ್ದರು.

ಹೀಗಾಗಿ ಆರೋಗ್ಯಕರ ಸಮಾಜವನ್ನು ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು ಎಂದರು.

ಈಗ ತಂತ್ರಜ್ಞಾನದ ಕಾರಣಕ್ಕೆ ಸಮಾಜ ಅತ್ಯಂತ ವೇಗವಾಗಿ ಬೆಳೆಯುತ್ತಿದೆ, ಬದಲಾಗುತ್ತಾ ಶಿಕ್ಷಣದ ಅಗತ್ಯ ಮತ್ತು ಮಹತ್ವ ಕೂಡ ಬದಲಾಗುತ್ತಿದೆ. ಕಾರ್ಪೋರೇಟ್ ಜಗತ್ತಿನ ಮಾರುಕಟ್ಟೆಗೆ ಬೇಕಾದ “ಮಾಲು” ಗಳನ್ನು ಮಾತ್ರ ಸೃಷ್ಟಿಸುವ ಒತ್ತಡವನ್ನು ಹೇರಲಾಗುತ್ತಿದೆ. ಈ ಸವಾಲನ್ನು ನಾವೆಲ್ಲರೂ ಅತ್ಯಂತ ಸಮನ್ವಯದಿಂದ ಎದುರಿಸಬೇಕಿದೆ.

ರಾಜಕೀಯ ಮಾರುಕಟ್ಟೆ, ಕಾರ್ಪೋರೇಟ್ ಮಾರುಕಟ್ಟೆಯ ಒತ್ತಡಗಳಿಗೆ ಮಣಿಯಬಾರದು.

ಸರ್ಕಾರಿ ಶಾಲೆಗಳ, ಸರ್ಕಸರಿ ಶಿಕ್ಷಕರ ವಿಚಾರದಲ್ಲಿ ಎರಡು ಮುಖ್ಯ ಸಂಗತಿಗಳನ್ನು ಮುಂದಿಟ್ಟು ಮಾತು ಮುಗಿಸುತ್ತೇನೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ‌ ದೌರ್ಜನ್ಯ ನಡೆಯುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿ ಆಗುತ್ತಿವೆ. ಆದರೆ, ಒಂದು ಸಮೀಕ್ಷೆಯ ಪ್ರಕಾರ ಸರ್ಕಾರಿಗಳಲ್ಲಿ ಇಂಥಾ ದೌರ್ಜನ್ಯ ಪ್ರಕರಣಗಳು ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಇದೆ. ಹೀಗಾಗಿ ಮಕ್ಕಳಲ್ಲಿ ಲಿಂಗ ಸೂಕ್ಷ್ಮತೆ, ಸಹಬಾಳ್ವೆ, ಸಹಿಷ್ಣತೆಯನ್ನು ಬೆಳೆಸುವಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರು ಬಹಳ ಮುಂದಿದ್ದಾರೆ.

ಅದಕ್ಕೇ ಹೇಳೋದು, ಖಾಸಗಿ ಶಾಲೆಗಳ ಕಟ್ಟಡದ ಗುಣಮಟ್ಟ, ಸರ್ಕಾರಿ ಶಾಲೆಗಳ ಶಿಕ್ಷಕರ ಗುಣಮಟ್ಟ ಉನ್ನತ ಮಟ್ಟದ್ದಾಗಿರುತ್ತದೆ.

ಈಗ ನಮ್ಮ ಸರ್ಕಾರ ಒಂದು ಹೊಸ ಕಾರ್ಯಕ್ರಮ‌ ರೂಪಿಸಿದೆ. “ನನ್ನ‌ ಶಾಲೆ ನನ್ನ ಜವಾಬ್ದಾರಿ” ಎನ್ನುವ ಕಾರ್ಯಕ್ರಮ. ಸರ್ಕಾರಿ ಶಾಲೆಗಳಲ್ಲಿ‌ ಓದಿದ ಲಕ್ಷಾಂತರ ಮಂದಿ ತಾವು ಓದಿದ ಶಾಲೆಗಳಿಗೆ ತಮ್ಮ ಕೈಲಾದ ನೆರವು ನೀಡುತ್ತಿದ್ದಾರೆ. ಹಲವರು ತಾವು ಓದಿದ ಶಾಲೆಗಳನ್ನು ದತ್ತು ಕೂಡ ಪಡೆದಿದ್ದಾರೆ. ಕೆಲವರು ಕೊಠಡಿಗಳನ್ನು ಕಟ್ಟಿಸಿಕೊಟ್ಟಿದ್ದಾರೆ. ಇಂಥಾ ಕಾಳಜಿಗಳು ಹೆಚ್ಚೆಚ್ವು ವ್ಯಕ್ತ ಆಗುವುದು ಸರ್ಕಾರಿ ಶಾಲೆಗಳಲ್ಲಿ‌ ಓದಿದವರಿಂದಲೇ. ನಾನು ಕೂಡ ಕೋಲಾರದಲ್ಲಿ ಓದಿದ್ದು‌ ಸರ್ಕಾರಿ ಶಾಲೆಯಲ್ಲೇ. ಈಗ ಆ ಶಾಲೆಗೆ ಅಪಾರ ನೆರವು ಒದಗಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ತಾವು ಓದಿದ ಶಾಲೆಗೆ ನೆರವು ನೀಡಿದ್ದಾರೆ. ಇದೀಗ ತಣ್ಣಗಿನ‌ ಚಳಚಳಿಯ ರೂಪ ಪಡೆದುಕೊಂಡಿದೆ.

ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಮೂಲಕ ನನ್ನ‌ ಶಾಲೆ ಮತ್ತು ಶಿಕ್ಷಕರುಗಳನ್ನು ಸ್ಮರಿಸಲು, ವಂಧಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಮೀಡಿಯಾ ಕನೆಕ್ಟ್ ನ ದಿವ್ಯಾ ರಂಗೇನಹಳ್ಳಿ ಮತ್ತು ಪುಣ್ಯ ಫೌಂಡೇಷನ್ ಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ್ ಮಹಾಸ್ವಾಮಿಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವರ ಮಾಧ್ಯಮ ಸಂಯೋಜನ ಲಕ್ಷ್ಮೀನಾರಾಯಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!