Don't spread misinformation about the Manjunatha Swamy temple in Dharmasthala: R. Ashoka

ಕಾಂಗ್ರೆಸ್‌ ಅವಧಿಯಲ್ಲಿ ಜಾತಿ ಸಮೀಕ್ಷೆಯನ್ನು ಏಕೆ ಮಾಡಲಿಲ್ಲ: ಆರ್‌.ಅಶೋಕ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಅವಧಿಯಲ್ಲಿ ಜಾತಿ ಸಮೀಕ್ಷೆಯನ್ನು (Caste census) ಏಕೆ ಮಾಡಲಿಲ್ಲ ಎಂದು ತಿಳಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಸವಾಲೆಸೆದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದು ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ.

ಬ್ರಿಟಿಷರ ನಂತರ ನೆಹರು, ಇಂದಿರಾಗಾಂಧಿ, ರಾಜೀವ್‌ಗಾಂಧಿ ಪ್ರಧಾನಿಯಾದರೂ, ಕಾಂಗ್ರೆಸ್‌ ಜಾತಿ ಸಮೀಕ್ಷೆ ಮಾಡಲಿಲ್ಲ. ಕಾಂಗ್ರೆಸ್‌ಗೆ ಅಂತಹ ಸಾಮಾನ್ಯ ಜ್ಞಾನ ಕೂಡ ಇಲ್ಲ. ಮನಮೋಹನ್‌ ಸಿಂಗ್‌ ಅವರ ಅವಧಿಯಲ್ಲಿ ಜಾತಿ ಗಣತಿ ಪ್ರಸ್ತಾಪವನ್ನು ತಿರಸ್ಕರಿಸಲಾಗಿತ್ತು ಎಂದರು.

2029 ಕ್ಕೆ ಮಹಿಳಾ ಮೀಸಲಾತಿ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದಕ್ಕೆ ಜನಗಣತಿ ಹಾಗೂ ಜಾತಿ ಸಮೀಕ್ಷೆ ನೆರವಾಗಲಿದೆ. ಇಂತಹ ಉತ್ತಮ ಕೆಲಸ ಮಾಡುತ್ತಿರುವ ಪ್ರಧಾನಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.

ಈಗ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಟೀಕೆ ಮಾಡುತ್ತಿದ್ದಾರೆ. 2015 ರಲ್ಲಿ ಜಾತಿ ಗಣತಿ ಮಾಡಿ ಹತ್ತು ವರ್ಷಗಳ ನಂತರ ಅದನ್ನು ಬಿಡುಗಡೆ ಮಾಡಲಾಯಿತು. ಈ ಬಗ್ಗೆ ಕಾಂಗ್ರೆಸ್‌ ಮೊದಲು ಯೋಚಿಸಬೇಕು. ದೇಶದಲ್ಲಿ ಜಾತಿ ಗಣತಿ ಮಾಡಲು ಆಗಿಲ್ಲವೆಂದು ಕಾಂಗ್ರೆಸ್‌ ಕ್ಷಮೆ ಕೋರಲಿ. ಯಾಕೆ ಮಾಡಿಲ್ಲವೆಂದು ಸಿಎಂ ಸಿದ್ದರಾಮಯ್ಯನವರೇ ತಿಳಿಸಲಿ ಎಂದು ಸವಾಲು ಹಾಕಿದರು.

ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇಲ್ಲ. 150 ಕೋಟಿ ರೂ. ಖರ್ಚಿನಲ್ಲಿ ಮಾಡಿದ ರಾಜ್ಯದ ಜಾತಿ ಗಣತಿ ವರದಿ ಏನಾಗಲಿದೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಈ ಸಮೀಕ್ಷೆಯ ವೇಳೆ ಯಾರೂ ಯಾರ ಮನೆಗೂ ಹೋಗಿಲ್ಲ ಎಂದು ಸ್ವಾಮೀಜಿಗಳೇ ಹೇಳುತ್ತಿದ್ದಾರೆ. ಈ ಸಮೀಕ್ಷೆಯ ಗತಿ ಏನು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಬೇಕು. ರಾಜ್ಯದ ಜಾತಿ ಗಣತಿ ವರದಿ ವಿರೋಧಿಸಿ ಎಲ್ಲ ಸಮುದಾಯಗಳು ಪ್ರತಿಭಟನೆ ಮಾಡುತ್ತಿವೆ. ಕೆಲವು ಸಮುದಾಯದವರು ತಾವೇ ಸ್ವತಃ ಹೊಸ ಸಮೀಕ್ಷೆ ಮಾಡುವುದಾಗಿ ಹೇಳಿದ್ದಾರೆ. ಸಚಿವರು ಕೂಡ ಇದನ್ನು ವಿರೋಧಿಸಿದ್ದಾರೆ. ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಈ ವರದಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯನ್ನು ಚುನಾವಣಾ ಆಯೋಗ ಬಳಸಿಕೊಳ್ಳಲಿದೆ. ಆದರೆ ಈ ರಾಜ್ಯದ ವರದಿ ಕಸದ ಬುಟ್ಟಿ ಸೇರಲಿದೆ. ಇದು ಯಾವ ಪ್ರಯೋಜನಕ್ಕೂ ಇರುವುದಿಲ್ಲ. ಸಿದ್ದರಾಮಯ್ಯ ಮನೆಯಲ್ಲಿ ಕುಳಿತು ಬರೆಸಿದ ಈ ವರದಿ ಅಧಿಕೃತವಲ್ಲ ಎಂದರು.

ಬಸ್‌ ಚಾಲಕರೊಬ್ಬರು ಬಸ್ಸಿನಲ್ಲೇ ನಮಾಜ್‌ ಮಾಡಿದ್ದಾರೆ. ಬಸ್ಸು ಚಲಾಯಿಸುತ್ತಿರುವಾಗ ನಮಾಜ್‌ ಮಾಡಿದ್ದರೆ ಪ್ರಯಾಣಿಕರ ಗತಿ ಏನು? ಸಿಎಂ ಸಿದ್ದರಾಮಯ್ಯ ಮಾಡಿದ ಓಲೈಕೆ ರಾಜಕಾರಣದಿಂದ ಹೀಗಾಗಿದೆ. ಈ ಚಾಲಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕು. ಇತ್ತೀಚೆಗೆ ಮುಸ್ಲಿಮರ ಸಭೆಗೆ ಹೋದ ಸಿಎಂ ಸಿದ್ದರಾಮಯ್ಯ ಅಲ್ಲಿ ಕೂಡ ನಿಮ್ಮ ಜೊತೆಗೆ ಇದ್ದೇನೆ ಎಂದು ಹೇಳಿದ್ದಾರೆ. ಯುದ್ಧದ ವಿಚಾರದಲ್ಲಿ ಕೆಟ್ಟ ಹೇಳಿಕೆ ನೀಡಿದ ಅವರು ನಂತರ ಯೂಟರ್ನ್‌ ಹೊಡೆದಿದ್ದಾರೆ ಎಂದರು.

ಡಿ.ಕೆ.ಶಿವಕುಮಾರ್‌ (DK Shivakumar) ಕಾಂಗ್ರೆಸ್ಸೇ ಬೇರೆ. ಸಿದ್ದರಾಮಯ್ಯನವರ ಕಾಂಗ್ರೆಸ್ಸೇ ಬೇರೆ. ಕಾಂಗ್ರೆಸ್‌ ಎರಡಾಗಿ ವಿಭಜನೆಯಾಗಿದೆ. ಸಚಿವ ತಿಮ್ಮಾಪುರ, ಸಂತೋಷ್‌ ಲಾಡ್‌ ಎಲ್ಲರೂ ಪಾಕಿಸ್ತಾನದ ಮಾಧ್ಯಮಗಳಲ್ಲಿ ಹೆಸರು ಪಡೆದಿದ್ದಾರೆ. ಇವರಿಗೆ ರಾಜ್ಯದಲ್ಲಿ ಯಾವುದೇ ಹೆಸರಿಲ್ಲ ಎಂದು ಟೀಕಿಸಿದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!