ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಇಂದು ಮುಂಜಾನೆಯಿಂದ ಸುರಿದ ಕೆಲವು ನಿಮಿಷಗಳ ಮಳೆಗೆ (Rain) ತತ್ತರಿಸಿದೆ.
ಭಾರೀ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ಮೂವರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ನಡೆದಿದೆ.
ಇಂದು ಬೆಳ್ಳಂ ಬೆಳಗ್ಗೆ ರಾಜಧಾನಿಯಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಇದರ ಪರಿಣಾಮ ಮನೆಯ ಗೋಡೆ ಕುಸಿದು ಮೂರು ಮಕ್ಕಳು ಹಾಗೂ ತಾಯಿ ಸಿಲುಕಿದ್ದರು, ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.
ಇನ್ನು ಭಾರೀ ಮಳೆಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಸ್ಥಗಿತಗೊಂಡಿವೆ.
ವರದಿಯ ಪ್ರಕಾರ, ದೆಹಲಿಗೆ ಬರಬೇಕಿದ್ದ ಮೂರು ವಿಮಾನ ಜೈಪುರಕ್ಕೆ ಮರಳಿ ತೆರಳಿದ್ದು 100 ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ.
ಅಷ್ಟೇ ಅಲ್ಲದೆ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಯಿತು. ಜೊತೆಗೆ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.