ದೊಡ್ಡಬಳ್ಳಾಪುರ: ಇಂದು ಪ್ರಕಟವಾದ ಎಸ್ಎಸ್ಎಲ್‌ಸಿ (SSLC) ಪರೀಕ್ಷಾ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ನಳಂದಾ ಪ್ರೌಢಶಾಲೆ (Nalanda High School) ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಸಾಧಿಸಿದ್ದಾರೆ.
ಶಾಲೆಯ ವಿದ್ಯಾರ್ಥಿನಿ ಅಮೃತ ಎಂ ಎಸ್ 625 ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಮತ್ತು ಗಾನವಿ ಎಸ್‌ಎಂ 625 ಕ್ಕೆ 623 ಅಂಕಗಳನ್ನು ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ 3ನೇ ಸ್ಥಾನಗಳಿಸಿ ಅತ್ಯುತ್ತಮ ಫಲಿತಾಂಶ ಪಡೆದಿದ್ದಾರೆ.
ಶಾಲೆಯಲ್ಲಿ ಒಟ್ಟು ಡಿಸ್ಟಿಂಕ್ಷನ್ ನಲ್ಲಿ 61 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 103 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 14 ವಿದ್ಯಾರ್ಥಿಗಳು ಪಾಸಾಗಿದ್ದು ಅದರಲ್ಲಿ 23 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು(100/100) ಅಂಕಗಳನ್ನು ಪಡೆದು ಅತ್ಯುತ್ತಮ ಫಲಿತಾಂಶವನ್ನು ಪಡೆದಿದ್ದಾರೆಂದು ಶಾಲೆಯ ಮುಖ್ಯ ಶಿಕ್ಷಕರಾದ ಸುನಿತಾ ಪಿ ತಿಳಿಸಿದ್ದಾರೆ.
ತಮ್ಮ ಕಠಿಣ ಪರಿಶ್ರಮದಿಂದ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳು, ಇದಕ್ಕೆ ಕಾರಣರಾದ ಶಿಕ್ಷಕರು, ಸಹಕರಿಸಿದ ಪೋಷಕರನ್ನು ಶಾಲಾ ಕಾರ್ಯದರ್ಶಿ ಅನುರಾಧಾ ಕೆ ಆರ್ ಅಭಿನಂದಿಸಿ ವಿದ್ಯಾರ್ಥಿಗಳೆಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸಿದ್ದಾರೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಪದ್ಧತಿಯನ್ನು ಅಳವಡಿಸಿಕೊಂಡು ಪರೀಕ್ಷಾ ಅಕ್ರಮವನ್ನು ತಡೆಗಟ್ಟಿ ಪರೀಕ್ಷೆಯ ಸಮಗ್ರತೆಯನ್ನು ಪುನರ್ ಸ್ಥಾಪಿಸಿರುವ ಶಿಕ್ಷಣ ಇಲಾಖೆಗೆ ವಿಶೇಷ ಅಭಿನಂದನೆಗಳನ್ನು ಶಾಲೆಯ ಕಾರ್ಯದರ್ಶಿ ಅನುರಾಧ ಕೆ ಆರ್ ಅವರು ತಿಳಿಸಿದ್ದಾರೆ.