Suhas Shetty murder: Human life is very important; Cmsiddaramaiah

ಸುಹಾಸ್ ಶೆಟ್ಟಿ ಹತ್ಯೆ: ಮನುಷ್ಯನ ಪ್ರಾಣ ಬಹಳ ಮುಖ್ಯ.. ಅಪರಾಧಿಗಳ ಪತ್ತೆ ಹಚ್ಚಿ ಕ್ರಮಕ್ಕೆ ಸೂಚನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್.
1925 ರಂದು ಪ್ರಾರಂಭವಾಗಿದ್ದು 2025 ಕ್ಕೆ ನೂರು ವರ್ಷಗಳಾಗುತ್ತಿದೆ.ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ ಎಂದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು

ರಾಹುಲ್ ಗಾಂಧಿ ಯವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ.

ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕು ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಶೇ.50% ಗಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ 50% ಆದರೆ, ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದರು.

ಹಿಂದುಳಿದವರಿಗೆ ಮೀಸಲಾತಿ ಅತ್ಯಂತ ಅನಿವಾರ್ಯ ಮತ್ತು ಅಗತ್ಯ

ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ. ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದರು.

ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಲು ಆಗ್ರಹ

ಮೀಸಲಾತಿಯಲ್ಲಿ ಶೇ.50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನ್ಯಾ.ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸಬೇಕು

ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದರು.

ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದು, ಪದೇಪದೇ ಕೋಮು ಗಲಭೆಗಳಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೊಲೆ ಗೀಡಾದ ವ್ಯಕ್ತಿ ರೌಡಿಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದು, ಈ ಬಗ್ಗೆ ಎಡಿಜಿಪಿ (ಕಾನೂನು ಸುವ್ಯವಸ್ಥೆ) ವರೊಂದಿಗೆ ಮಾತನಾಡಿ ಅವರನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲು ಸೂಚಿಸಿದೆ.

ಮನುಷ್ಯನ ಪ್ರಾಣ ಬಹಳ ಮುಖ್ಯ. ಕೂಡಲೇ ಅಪರಾಧಿಗಳು ಯಾರೇ ಆಗಿದ್ದರೂ ಅವರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕ್ರಣಗಳನ್ನೇ ಹುಡುಕುತ್ತಾರೆ. ಒಂದು ವಾರದಿಂದ ಪೆಹಲಗಾಂ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ. ಉಗ್ರರ ದಾಳಿಗೆ 26 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿಗಳು ಅಲ್ಲಿಗೆ ಭೇಟಿ ನೀಡಿದ್ದಾರೆಯೇ? ಬಿಜೆಪಿಯವರಿಗೆ ಪ್ರಧಾನಿ ಮೋದಿಯವರಿಗೆ ಇದು ಮುಖ್ಯ ಅನ್ನಿಸುತ್ತಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯ ಕಾರಣ

ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದ ಸಿಎಂ ಕಾಶ್ಮೀರದಲ್ಲಿ ಒಬ್ಬ ಪೋಲಿಸ್ ಆಗಲಿ, ಭದ್ರತಾ ಪಡೆಯವರಾಗಲಿ ನಿಯೋಜಿಸಿಲ್ಲ. ಯಾರೂ ಇಲ್ಲ ಎಂದರೆ ಏನು ಅರ್ಥ? ನೂರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ ಪೊಲೀಸರು ಇರಬೇಕು ಎಂದರು.

ನನಗೂ ಬೆದರಿಕೆ ಕರೆ ಬಂದಿದೆ

ವಿಧಾನಸಭಾಧ್ಯಕ್ಷ ಯು.ಟಿ .ಖಾದರ್ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ ನನಗೂ ಬೆದರಿಕೆ ಕರೆಗಳು ಬರುತ್ತವೆ. ಈ ಬಗ್ಗೆ ಪೊಲೀಸರಿಗೆ ತಿಳಿಸಿ, ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]