ಮಂಗಳೂರು: ಹಿಂದೂಪರ ಕಾರ್ಯಕರ್ತರ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್‌ಗೆ ಕರೆ ನೀಡಿವೆ.
ಏಕಾಏಕಿ ಬಂದ್ ಕರೆ ಹಿನ್ನೆಲೆಯಲ್ಲಿ ಇಂದು ದ್ವಿತೀಯ ಪಿ.ಯು. ಗಣಿತ -2 ಪರೀಕ್ಷೆ ಹಾಗೂ ರಾಜೀವ ಗಾಂಧಿ ಆರೋಗ್ಯ ಬಿ ಫಾರ್ಮಾ ಸೆಮಿಸ್ಟರ್ ಪರೀಕ್ಷೆ ನಿಗದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿಢೀರ್ ಬಂದ್ ನಿಂದಾಗಿ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ.
ದ್ವಿತೀಯ ಪಿ.ಯು. ಗಣಿತ 2 ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ಈಗಾಗಲೇ ರವಾನೆ ಮಾಡಲಾಗಿದೆ. ಜಿಲ್ಲಾಡಳಿತವು ಪರೀಕ್ಷೆಯನ್ನು ಮುಂದೂಡಿಲ್ಲ. ಜಿಲ್ಲೆಯಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಾಣವಾಗಿದೆ ಎಂದು ಜಿಲ್ಲಾಡಳಿತವೇ ನಿಷೇಧಾಜ್ಞೆ ಜಾರಿಗೊಳಿಸಿದೆ. ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೀಮಿತವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಮಂಗಳೂರಿನ ನಡು ರಸ್ತೆಯಲ್ಲಿ ಮತ್ತೆ ಹರಿದ ನೆತ್ತರು..!| ವಿಜಯೇಂದ್ರ ಕಿಡಿ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇದೇ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್‌ಎಂ.ಪಿ. ಅವರು ಆದೇಶ ಹೊರಡಿಸಿದ್ದಾರೆ.