Krishna Tribunal-2: Meeting led by CM

ಕೃಷ್ಣಾ ನ್ಯಾಯಾಧೀಕರಣ-2: ಸಿಎಂ ನೇತೃತ್ವದಲ್ಲಿ ಸಭೆ.. ಮುಖ್ಯಾಂಶಗಳು ಇಲ್ಲಿದೆ

ಬೆಂಗಳೂರು: ಕೃಷ್ಣಾ ನ್ಯಾಯಾಧೀಕರಣ-2 (Krishna Tribunal-2) ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯ ಮುಖ್ಯಾಂಶಗಳು

• ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

• ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗಜೆಟ್ ಅಧಿಸೂಚನೆ ಪ್ರಕಟಿಸಲು ಮತ್ತು ಈ ಕುರಿತಾಗಿ ದಿನಾಂಕ 16-09-2011ರ ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಡಿಸಲು ಕೋರಿ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರಲು ನಿರ್ಧರಿಸಲಾಯಿತು.

• ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದ್ದು, ಈ ಕುರಿತಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ, ಇನ್ನೂ ಅಧಿಸೂಚನೆ ಆಗಿರುವುದಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇದುವರೆಗೂ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆಯ ಪ್ರದೇಶದಲ್ಲಿನ ರೈತರು ತಮ್ಮ ಹಕ್ಕಿನ ಪಾಲನ್ನು ಬಳಸಲು ಬಹಳ ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

• ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿದಂತೆ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿರುತ್ತದೆ. ಇದೇ ರೀತಿ ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ ದಿನಾಂಕ 20-02-2020ರ ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿರುತ್ತದೆ. ಇದೇ ರೀತಿಯಲ್ಲಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.

• ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-II ದಿನಾಂಕ 30-12-2010 ರಂದು ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ನೀಡಿದ್ದು, ದಿನಾಂಕ 29-11-2013ರಂದು further report ನೀಡಿರುತ್ತದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುತ್ತದೆ. ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ಹಂಚಿಕೆ ನಿಗದಿಪಡಿಸಿರುತ್ತದೆ.

• ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ ತನ್ನ ದಿನಾಂಕ 16-09-2011 ರ ಆದೇಶದಲ್ಲಿ ʻʻತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿತ್ತು.ʼʼ

ಸಭೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಶರಣಬಸಪ್ಪ ಗೌಡ ದರ್ಶನಾಪುರ, ಮಹಾದೇವಪ್ಪ, ಶಿವಾನಂದ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನ್ಯಾಯವಾದಿ ಮೋಹನ್ ಕಾತರ್ಕಿ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!