ಬೆಂಗಳೂರು: ಮುಂದಿನ 4 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ (Heavy rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಹೈಲರ್ಟ್ ನೀಡಲಾಗಿದೆ.
ಶುಕ್ರವಾರ ಸಂಜೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಮೇ 3ರಿಂದ 9ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಅಂದಾಜಿಸಲಾಗಿದೆ.
ಮುಂದಿನ 48 ಗಂಟೆ ಕಾಲ ಹಾಸನ, ಮಂಡ್ಯ ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 4ರಂದು ರಾಮನಗರ, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ.
ಅಲ್ಲದೆ ಚಿಕ್ಕಮಗಳೂರಿನಲ್ಲಿ ಮೇ 3 ರಿಂದ 9ರ ವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)