ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಕನ್ನಡದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್ಷ ಧರ್ಮರಾಜು ಎಂಬುವರು ನೀಡಿದ ದೂರಿನ ಮೇರೆಗೆ ಗಾಯಕ ಸೋನು ನಿಗಮ್ ವಿರುದ್ದ ಭಾರತೀಯ ನ್ಯಾಯಸಂಹಿತೆ (ಬಿಎನ್‌ಎಸ್) 351(1) ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು, 353ನಡಿ ಧಾರ್ಮಿಕ ಅಥವಾ ಭಾಷಿಕ ಭಾವನೆಗಳ ಮೇಲೆ ದ್ವೇಷ ಸೇರಿದಂತೆ ವಿವಿಧ ಸೆಕ್ಷನ್ ನಡಿ ಪೊಲೀಸರು ಎಫ್‌ಐಆರ್ ದಾಖಲಿ ಸಿಕೊಂಡಿದ್ದಾರೆ.
ದೂರಿನ ವಿವರ: ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜ್ ಆಫ್ ಎಂಜಿನಿಯ ರಿಂಗ್ ಮತ್ತು ತಂತ್ರಜ್ಞಾನದಲ್ಲಿ ಏಪ್ರಿಲ್ 25 ಮತ್ತು 26ರಂದು ಮ್ಯೂಸಿಕ್ ಈವೆಂಟ್‌ನಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೋನು ನಿಗಮ್ ಅವರು ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಎಫ್ಐಆರ್‌ನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ.