ದೊಡ್ಡಬಳ್ಳಾಪುರದ ESI ಆಸ್ಪತ್ರೆಗಿಲ್ಲ ಉದ್ಘಾಟನೆ ಭಾಗ್ಯ: ಫೀಲ್ಡಿಗಿಳಿದ ಕಜಾವೇ..!

ESI Hospital in Doddaballapur does not have the privilege of inauguration

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ನಿರ್ಮಾಣವಾಗಿ ಉದ್ಘಾಟನೆ ಭಾಗ್ಯ ಕಾಣದೆ ಇರುವ ಇಎಸ್‌ಐ (ESI) ಆಸ್ಪತ್ರೆ ಶೀಘ್ರವಾಗಿ ಆರಂಭಿಸಬೇಕೆಂದು ಕನ್ನಡ ಜಾಗೃತಿ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಎಬಿ ಬಸವರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತಂತೆ ಮಾತನಾಡಿದ ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್ ಎಂ. ದೊಡ್ಡಬಳ್ಳಾಪುರದಲ್ಲಿನ ನೂತನ ESI ಹಾಸ್ಪಿಟಲ್ ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಗಳು ಕಳೆದರೂ ಸಹ ಈ ಭಾಗದ ಕಾರ್ಮಿಕರಿಗೆ ಸೇವೆ ಸಿಗುತ್ತಿಲ್ಲ.

ಇಲ್ಲಿಯ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ESI ಹಾಸ್ಪಿಟಲ್‌ಗಾಗಿ ದೂರದ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕಾರ್ಖಾನೆಗಳಿವೆ, ಮತ್ತು ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಅಲ್ಲದೆ ನಮ್ಮ ದೊಡ್ಡಬಳ್ಳಾಪುರ ಇಂಡಸ್ಟ್ರಿಯ ಏರಿಯಾ ಏಷ್ಯಾದಲ್ಲಿ ಎರಡನೇ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ವಿಷಯ.

ಆದರೆ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಕೇಳುವವರು ಯಾರು ಇಲ್ಲ, ಇಲ್ಲಿನ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವವರು ಯಾರು ಇಲ್ಲದಂತಾಗಿದೆ.. ಅಲ್ಲದೆ ಈ ಭಾಗದಲ್ಲಿ ಅತಿ ಹೆಚ್ಚು ತೆರಿಗೆ ಸಂದಾಯ ಆಗುತ್ತದೆ ಎಂದು ತಿಳಿಸಿದರು.

ನಂತರ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಶಶಿಧರ್ ಸಿ, ESI ಹಾಸ್ಪಿಟಲ್ ಸೇವೆ ಪ್ರತಿಯೊಬ್ಬ ಕಾರ್ಮಿಕರಿಗೂ ಅತಿ ಮುಖ್ಯವಾಗಿದೆ. ಏಕೆಂದರೆ ಈ ಭಾಗದಲ್ಲಿ ಹೆಚ್ಚಾಗಿ ರೈತಾಪಿ ಜನ ವಾಸಿಸುತ್ತಾರೆ. ಇವರ ಮಕ್ಕಳು ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಚಿಕಿತ್ಸೆ ಸೌಲಭ್ಯ ಸಿಗುತ್ತಿಲ್ಲ.

ಅಧಿಕಾರಿಗಳು ಹೆಚ್ಚೆತ್ತೆಮು ತಕ್ಷಣ ಇಎಸ್ಐ ಆಸ್ಪತ್ರೆಯನ್ನು ಆರಂಭವಾಗಬೇಕು.. ಇಲ್ಲವಾದಲ್ಲಿ ನಮ್ಮ ಸಂಘಟನೆಯಿಂದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಈ ವೇಳೆ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷ ಸುರೇಶ್ ಸಿಂಗಂ, ತಾಲೂಕು ಉಪಾಧ್ಯಕ್ಷ ಮಹದೇವ್, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಶಿವಕುಮಾರ ಸ್ವಾಮಿ, ಮಂಜುನಾಥ್ ನಿಜಗಲ್ ಇದ್ದರು.

ರಾಜಕೀಯ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್ ಟ್ವೀಟ್ ಇಲ್ಲಿದೆ ನೋಡಿ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ Gen Z ಶಾಕ್.. ವ್ಯಂಗ್ಯವಾಡಿದ ಪ್ರಕಾಶ್ ರಾಜ್

ಜೆನ್-ಝಿ (Gen Z) ಐಕಾನ್ ಎಂದೇ ಬಿಂಬಿತವಾಗುತ್ತಿದ್ದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರಿಗೆ, ಬಿಜೆಪಿ ಸೇರಿದ ಬಳಿಕ ಏಕೋ ಗ್ರಹಗತಿ ಕೆಟ್ಟಿದಂತಿದೆ. ಇದು ವಾಸ್ತವ ಸಂಗತಿಯಾದ್ರೂ, ಕೆಲವರಿಗೆ ಈ ವರದಿ

[ccc_my_favorite_select_button post_id="121370"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]