NEET exam: Tight security at 4 exam centers in Doddaballapur

NEET ಪರೀಕ್ಷೆ: ದೊಡ್ಡಬಳ್ಳಾಪುರದ 4 ಪರೀಕ್ಷಾ ಕೇಂದ್ರಗಳ ಬಳಿ ಬಿಗಿ ಭದ್ರತೆ| Video ನೋಡಿ

ದೊಡ್ಡಬಳ್ಳಾಪುರ: 2025 ನೇ ಸಾಲಿನಲ್ಲಿ ವೈದ್ಯಕೀಯ ಪ್ರವೇಶಾತಿ ಕಲ್ಪಿಸಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET Exam)ಯು ರಾಜ್ಯಾದ್ಯಂತ ಮೇ 4 ರಂದು ನಡೆಯುತ್ತಿದ್ದು, ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ

ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು, ಮಾದಗೊಂಡನಹಳ್ಳಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಆಫೀಸ್ ರಸ್ತೆಯ ಸರ್ಕಾರಿ ಪದವಿ ಕಾಲೇಜು(ಪ್ರೌಢಶಾಲಾ ವಿಭಾಗ) ಈ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ NEET ಪರೀಕ್ಷೆ ನಡೆಯುತ್ತಿದೆ.

ಮಧ್ಯಾಹ್ನ 2:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 01.30 ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳ ಸಹಿತ ಹಾಜರಾಗಿದ್ದಾರೆ.

ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ತೆರಳಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕಿದೆ‌.

NEET ಪರೀಕ್ಷೆಯು ಸುಗಮವಾಗಿ ನಡೆಸಲು ಜಿಲ್ಲಾಡಳಿತದಿಂದ ಸಿದ್ದತೆ ಕೈಗೊಳ್ಳಲಾಗಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಲು ನಾಲ್ಕು ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಭದ್ರತೆಗಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯವಸ್ಥೆ, ಸಿ.ಸಿ ಕ್ಯಾಮೆರಾ ಅಳವಡಿಕೆ, ಆಂಬುಲೆನ್ಸ್ ಸೇವೆ , ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆ ಕಲ್ಪಿಸಲಾಗಿದೆ‌

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!