ವಾರಾಣಸಿ: ಪದ್ಮಶ್ರೀ ಪುರಸ್ಕೃತ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ (Swami Sivananda Baba) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 128 ವರ್ಷ ವಯಸ್ಸಾಗಿತ್ತು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ವಾರಾಣಸಿಯ ಬಿಎಚ್ಯು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಅವರು ಮೃತರಾಗಿದ್ದು, ಭಾನುವಾರ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ವರದಿಗಳು ತಿಳಿಸಿವೆ.
ಯೋಗಕ್ಕಾಗಿಯೇ ಜೀವನವನ್ನು ಮುಡಿಪಾಗಿಟ್ಟಿದ್ದ ಶಿವಾನಂದ ಅವರ ಸೇವೆಗಾಗಿ 2022ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿತ್ತು.
ಈ ಪುರಸ್ಕಾರವನ್ನು ಅಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು.