ಧರ್ಮಸ್ಥಳ: ಮನೆಯ ಸಮೀಪದಲ್ಲಿ ಆಟವಾಡುತ್ತಿದ್ದ 16 ವರ್ಷದ ಬಾಲಕ ಹೃದಯಾಘಾತದಿಂದ (Heart attack) ಸಾವನಪ್ಪಿರುವ ಘಟನೆ ಜೋಡುಸ್ಥಾನದಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಪ್ರಥಮ್ ಎಂದು ಗುರುತಿಸಲಾಗಿದೆ.
ಶಾಲೆಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಮನೆಯ ಸಮೀಪ ಗೆಳೆಯರೊಂದಿಗೆ ಆಟವಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ.
ವಿಷಯ ತಿಳಿದ ಪೋಷಕರು ಕೂಡಲೇ ಪ್ರಥಮ್ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗಾಗಲೇ ಪ್ರಥಮ್ ಸಾವನಪ್ಪಿರುವುದಾಗಿ ವೈಧ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಹೆಂಡತಿಯ ಮೂಗು ಸುಂದರವಾಗಿದೆ ಎಂದು ಕಚ್ಚಿ ತಿಂದ ಗಂಡ..!
ಇದರಿಂದ ಆಘಾತಕ್ಕೆ ಒಳಗಾದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.