
ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ಬಲ್ಕರ್ ಪಲ್ಟಿ ಹೊಡೆದಿರುವ ಘಟನೆ (Accident) ತಾಲೂಕಿನ ಮಧುರೆ ಕೆರೆ ಏರಿ ತಿರುವಿನಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ ಮೂಲಕ ನೆಲಮಂಗಲ ಮಾರ್ಗವಾಗಿ ತೆರಳುವ ವೇಳೆ ಮಧುರೆ ಕೆರೆ ಏರಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಆದರೆ ಸಿಮೆಂಟ್ ಬಲ್ಕರ್ ಬಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಮುರಿದಿದ್ದು, ಸಿಮೆಂಟ್ ಬಲ್ಕರ್ಗೆ ಹಾನಿಯಾಗಿದೆ.
ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಸ್ಕಾಂ ಸಿಬ್ಬಂದಿ ಹಾನಿಯಾಗಿರುವ ವಿದ್ಯುತ್ ಕಂಬಗಳನ್ನು ಬದಲಿಸಲು ಕಾರ್ಯನಿರತರಾಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಈ ವ್ಯಾಪ್ತಿಯಲ್ಲಿ ಪದೇ ಪದೇ ಬಾರಿ ವಾಹನಗಳು ಮಿತಿಮೀರಿದ ವೇಗದಿಂದ ಪದೇ ಪದೇ ಅಪಘಾತಕ್ಕೆ ಒಳಗಾಗುತ್ತಿವೆ.


