
ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ (Chamundeshwari Temple) ಸುತ್ತಲಿನ 100 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ.

ದೇವಾಲಯಕ್ಕೆ ಆಗಮಿಸುವ ಗಣ್ಯ, ಅತಿಗಣ್ಯ ವ್ಯಕ್ತಿಗಳು, ಪ್ರವಾಸಿಗರು, ವಿದೇಶಿ ಪ್ರವಾಸಿಗರು ಹಾಗೂ ಭಕ್ತಾಧಿಗಳಿಗೆ ಸುಲಲಿತ ವಾಗಿ ಚಲಿಸುವ, ಯಾವುದೇ ಅಡೆತಡೆಯಾಗದ ರೀತಿಯಲ್ಲಿ ಈ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಲಾಗಿದೆ.
ಈ ನಿಟ್ಟಿನಲ್ಲಿ ಪ್ರಾಧಿಕಾರವು ಚಾಮುಂಡೇಶ್ವರಿ ದೇವಾಲಯದ ಸುತ್ತಲೂ 100 ಮೀರ್ಟ ಪರಿಮಿತಿಯಲ್ಲಿ ಯಾವುದೇ ವ್ಯಾಪಾರ ವಹಿವಾಟು ಮಾಡದಂತೆ ನಿರ್ಬಂಧಿಸಿ ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಸ್ಥಳೀಯ ಗ್ರಾಮಸ್ಥರು, ವ್ಯಾಪಾರಸ್ಥರು ಹಾಗೂ ಭಕ್ತಾಧಿಗಳು ಪ್ರವಾಸಿಗರು ಪ್ರಾಧಿಕಾರದೊಂದಿಗೆ ಸಹಕರಿಸಬೇಕು ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವಾಸಿಗರು ಮತ್ತು ಭಕ್ತರ ಅನುಕೂಲ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನದ ಸುತ್ತಲಿನ 100 ಮೀ. ಪ್ರದೇಶಲ್ಲಿ ಯಾವುದೇ ವ್ಯಾಪಾರ ವಹಿವಾಟು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ.
ಸಾರ್ವಜನಿಕರು ನಮಗೆ ಸಹಕಾರ ನೀಡಬೇಕಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ. ಜೆ.ರೂಪಾ ಮನವಿ ಮಾಡಿದ್ದಾರೆ.


