SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ; ಬೆಂ.ಗ್ರಾ.ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಚಿವರಿಂದ ಸನ್ಮಾನ

Minister felicitates students from Bengaluru district for scoring high marks in SSLC exam

ಬೆಂ.ಗ್ರಾ.ಜಿಲ್ಲೆ (SSLC): ವಿದ್ಯಾರ್ಥಿಗಳಿಗೆ ಗುಣಮಟ್ಟದ, ಮೌಲ್ಯಯುತ ಶಿಕ್ಷಣ ಕಲ್ಪಿಸಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಕಾನ್ವೆಂಟ್ ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ (K.H.Muniyappa) ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01ರ ಫಲಿತಾಂಶದಲ್ಲಿ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ
ಸನ್ಮಾನಿಸಿ, ಅಭಿನಂದಿಸಿದರು.

ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ 150 ಕೋಟಿ ರೂ.ಗಳ ಸಿ.ಎಸ್.ಆರ್ ಅನುದಾನದಡಿ 114 ಶಾಲೆಗಳನ್ನು ಅಭಿವೃದ್ಧಿಪಡಿಸಲು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ.

ಹಿಂದೆ ಇದ್ದ ವಿದ್ಯಾಭ್ಯಾಸದ ಕಠಿಣ ಹಾದಿಯನ್ನು ಈಗಿರುವ ಮಕ್ಕಳು ಅನುಭವಿಸಿ ಬಾರದು ಎಂಬುದರ ಬಗ್ಗೆ ಸಚಿವರು ಹೇಳುತ್ತಾ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಕೌಶಲ್ಯಾಧರಿತ ತರಗತಿಗಳು, ಡಿಜಿಟಲ್ ಲೈಬ್ರರಿ, ಕಂಪ್ಯೂಟರ್ ತರಬೇತಿ ಸೇರಿದಂತೆ ಅತ್ಯಾಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಮಾದರಿ ಶಾಲೆಗಳನ್ನು ನಿರ್ಮಿಸಲಾಗುವುದು.

ವಿದ್ಯಾರ್ಥಿಗಳಿಗೆ ಪಿಯುಸಿ ಹಂತದವರೆಗೆ ಉಚಿತ ಗುಣಮಟ್ಟದ ಶಿಕ್ಷಣ ನೀಡಿದಲ್ಲಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಆಗದಂತೆ ಈಗಾಗಲೇ ರಾಜ್ಯ ಮಟ್ಟದಲ್ಲಿ ಶಿಕ್ಷಕರ ನೇಮಕ ಮಾಡಲು ಸಿದ್ಧತೆ ನಡೆಸಲಾಗಿದೆ. ಶಾಲೆಗಳಲ್ಲಿ ಕುಂದು ಕೊರತೆಗಳಲಿದ್ದಲ್ಲಿ ಜಿಲ್ಲಾಡಳಿತ ಗಮನಕ್ಕೆ ತಂದಲ್ಲಿ ಶೀಘ್ರ ಸಮಸ್ಯೆ ಬಗೆಹರಿಸಲಾಗುವುದು.

ಮುಂದಿನ ವರ್ಷದಲ್ಲಿ ಟಾಪ್ 5 ಸ್ಥಾನಗಳಲ್ಲಿ ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇರಬೇಕು ಎಂಬುದು ನನ್ನ ಆಸೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕೆಲಸ ಮಾಡಬೇಕು ಅದಕ್ಕೆ ಪೂರಕವಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಸಚಿವರು ಹೇಳಿದರು.

ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಚಲನವಲನ, ಕ್ಷೇಮಾಭಿವೃದ್ಧಿ, ವಿದ್ಯಾಭ್ಯಾಸಕ್ಕೆ ತಯಾರಿ ಹೇಗೆ ನಡೆಸುತ್ತಿದ್ದಾರೆ. ಶಾಲೆಯಿಂದ ಬಂದ ನಂತರ ಮನೆಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವ ಮೂಲಕ ಒಳ್ಳೆಯ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಿ ಎಂದರು.

ವಿದ್ಯಾರ್ಥಿಗಳು ಕೂಡ ಜೀವನದಲ್ಲಿ ಗುರಿ ಇಟ್ಟುಕೊಂಡು ತ್ಯಾಗ ಮತ್ತು ಪರಿಶ್ರಮದಿಂದ ಓದಿದರೆ ಉತ್ತಮ ಅಂಕಗಳು ಬರಲು ಸಾಧ್ಯ ಎಂದರು.

16 ವಿದ್ಯಾರ್ಥಿಗಳಿಗೆ ಸನ್ಮಾನ

ಅನುದಾನ ರಹಿತ ಶಾಲೆಯ ಸಿ.ಭಾವನಾ (625/625), ರಂಜಿತ ಎಂ.ಸಿ (625/625), ರೋಹನ್ ರಾಜ್ ಎಸ್(625/624), ತೇಜಸ್ ಎಸ್ (625/624), ಲಿಖಿತ ಎಂ(625/624), ಅಮೃತಾ ಎಂ.ಎಸ್(625/624), ಗಾನವಿ ಎಸ್.ಎಂ (625/623). ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೋಹನ್ ಜಿ.ಎಂ (625/623). ಅನುದಾನ ರಹಿತ ಶಾಲೆಯ ಸಚಿನ್ ತೇಜಸ್ ಎಂ.ಜೆ (625/622), ತನುಶ್ರೀ(625/622), ಹನಿ ಕೃತಿ ಎಸ್(625/622),ಮೋಹಿತ.ಕೆ.ಎನ್
(625/622), ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಐಶ್ವರ್ಯ (625/618), ನಿಶ್ಚಿತ ಆರ್ (625/617) ಹಾಗೂ ಸರ್ಕಾರಿ ಪ್ರೌಢಶಾಲೆಯ ಗೌತಮ್ ಎಂ ಮತ್ತು ಅನುದಾನಿತ ಶಾಲೆಯ ಯಾಮಿನಿ ವಿ (625/616).

ಶೇಕಡ 100 ರಷ್ಟು ಫಲಿತಾಂಶ ಪಡೆದ ಬಿಜ್ಜವಾರ ಸರ್ಕಾರಿ ಶಾಲೆ

2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ರಲ್ಲಿ ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 100 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮಾದರಿ ಶಾಲೆ ಎನಿಸಿಕೊಂಡಿದೆ.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಬಯಪ ಸದಸ್ಯರಾದ ಮಂಜುನಾಥ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]