Permanent irrigation project for Ramanagara district using Cauvery: DCM DK Shivakumar

ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ: ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ ನೀರಿನ 5 ನೇ ಹಂತ, ಎತ್ತಿನಹೊಳೆ ಸೇರಿದಂತೆ ಹಲವಾರು ಅಸಾಧ್ಯಗಳನ್ನು ಸಾಧ್ಯವಾಗಿಸಿದ ಕೀರ್ತಿ ಇವರದ್ದು.

ಇದರ ಭಾಗವಾಗಿ ಮೊದಲಿಗೆ ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಗೆ ಗುದ್ದಲಿ ಪೂಜೆ ಸೋಮವಾರ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು.

ಏಕೆ ಕೆಲಸ ವಿಳಂಬವಾಗುತ್ತಿದೆ, ಏನಾದರೂ ಅಡೆತಡೆಗಳಿವೆಯೇ ಎಂದು ಅಧಿಕಾರಿಗಳು, ಯೋಜನೆಯ ಕಾಮಗಾರಿ ನಡೆಸುತ್ತಿರುವ ಹೈದರಾಬಾದಿನ ಮೆಘಾ ಇಂಜಿನಿಯರಿಂಗ್ ಸಂಸ್ಥೆಯ ಎಂಜಿನಿಯರ್ ಗಳ ಬಳಿ ಮಾಹಿತಿ ಪಡೆದುಕೊಂಡರು ಹಾಗೂ ಅಧಿಕಾರಿಗಳ ಬಳಿ ಯೋಜನೆಯ ಪ್ರಗತಿಯ ಬಗ್ಗೆ ವಿವರಗಳನ್ನು ಪಡೆದರು.

ಇದಾದ ನಂತರ ಇಗ್ಗಲೂರು ಬ್ಯಾರೇಜ್ ವರೆಗೆ ನೀರು ಹರಿಸಲು ಕೊರೆಯುತ್ತಿರುವ ಸುರಂಗ ಹಾಗೂ ಅದರ ಲೈನಿಂಗ್ ಕಾಮಗಾರಿಯನ್ನು ನಿಕಟಪೂರ್ವ ಸಂಸದರಾದ ಡಿ.ಕೆ.ಸುರೇಶ್, ಶಾಸಕರಾದ ಸಿ.ಪಿ.ಯೋಗೆಶ್ವರ್, ಕದಲೂರು ಉದಯ್, ವಿಧಾನಪರಿಷತ್ ಸದಸ್ಯರಾದ ಎಸ್.ರವಿ, ಸುಧಾಮ್‌ ದಾಸ್ ಜೊತೆ ವೀಕ್ಷಣೆ ಮಾಡಿದರು.

ಹಿರೇನಾಗರದಮ್ಮ ದೇವಾಲಯದ ಆವರಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು.

“ರೂ.540 ಕೋಟಿ ವೆಚ್ಚದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಂಕಲ್ಪ ತೊಟ್ಟಿದ್ದು ವರ್ಷದ ಡಿಸೆಂಬರ್ ವೇಳೆಗೆ ಯೋಜನೆ ಪೂರ್ಣಗೊಳಿಸಲಾಗುವುದು” ಎಂದು ಹೇಳಿದರು.

“ರಾಮನಗರ ಜಿಲ್ಲೆಗೆ ಕುಡಿಯುವ ನೀರನ್ನು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ” ಎಂದರು.

ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುವುದೇ ಎಂದು ಕೇಳಿದಾಗ, “ಅಗತ್ಯಕ್ಕೆ ತಕ್ಕಂತೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಯೋಜನೆಗೆ ಭೂಮಿ ನೀಡಿ ಸಹಕಾರ ನೀಡಿದ ರೈತರಿಗೆ ಉತ್ತಮ ಪರಿಹಾರ ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತರ್ಜಲ ಹೆಚ್ಚಳ ಸೇರಿದಂತೆ ಜಿಲ್ಲೆಯ ಜನರ ಕುಡಿಯುವ ನೀರಿನ ಬವಣೆ ತಪ್ಪಲಿದೆ” ಎಂದು ಹೇಳಿದರು.

ಯೋಜನೆಯ ವಿವರ

ಮಳೆಯ ಅಭಾವದ ಕಾರಣಕ್ಕೆ ಹಲವಾರು ವರ್ಷಗಳಿಂದ ತತ್ತರಿಸಿ ಹೋಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಸುಮಾರು 10.82 ಲಕ್ಷ ಜನರಿಗೆ ಹಾಗೂ 9.03 ಲಕ್ಷ ಜಾನುವಾರುಗಳಿಗೆ ಈ ಕುಡಿಯುವ ನೀರಿನ ಯೋಜನೆಯಿಂದ ಲಾಭವಾಗಲಿದೆ.

“ರೂ.540 ಕೋಟಿ ವೆಚ್ಚದಲ್ಲಿ ಈ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ‌. ಮಳವಳ್ಳಿಯ ಬೆಳಕವಾಡಿ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸತ್ತೇಗಾಲ ಅಣೆಕಟ್ಟಿನಿಂದ 220 ಕ್ಯೂಸೆಕ್ಸ್ ನೀರನ್ನು 180 ದಿನಗಳ ಕಾಲ ಇಗ್ಗಲೂರು ಬ್ಯಾರೇಜಿಗೆ ಹರಿಸಲಾಗುತ್ತದೆ.

ಸತ್ತೇಗಾಲ ಅಣೆಕಟ್ಟಿನಿಂದ ಇಗ್ಗಲೂರು ಬ್ಯಾರೇಜ್ ತನಕ ಸುಮಾರು ಸುಮಾರು 26 ಕಿ.ಮೀ ಉದ್ದ ಗುರುತ್ವಾಕರ್ಷಣೆಯ ಮೂಲಕ ನೀರನ್ನು ಹರಿಸುತ್ತಿರುವುದು ಈ ಯೋಜನೆಯ ವಿಶೇಷ. 12.5 ಕಿ.ಮೀ ಉದ್ದದ ವರೆಗೆ ಸುರಂಗ ಮಾರ್ಗ ನಂತರ 13.35 ಕಿ.ಮೀ ಉದ್ದ ಪೈಪ್ ಲೈನ್ ಇರಲಿದೆ. ಪ್ರಸ್ತುತ ಸುರಂಗ ಮಾರ್ಗವು 4 ಮೀ ಸುತ್ತಳತೆ ಹೊಂದಿದ್ದು ‘ಡಿ’ ಆಕಾರದಲ್ಲಿ ಇರಲಿದೆ.

ನಂತರ ಏತ ನೀರಾವರಿ ಮೂಲಕ ಇಗ್ಗಲೂರು ಬ್ಯಾರೇಜ್ ನಿಂದ ಮೊಹೇನಹಳ್ಳಿ ಕೆರೆಗೆ, ಈ ಕೆರೆಯಿಂದ ಕಣ್ವ ಜಲಾಶಯ‌ ನಂತರ ಮಂಚನಬೆಲೆ ಹಾಗೂ ವೈ.ಜಿ.ಗುಡ್ಡ ಜಲಾಶಯಕ್ಕೆ ನೀರು ತುಂಬಿಸಲಾಗುವುದು.

ಪ್ರಸ್ತುತ ಸುಮಾರು 11.33 ಕಿ.ಮೀ ವರೆಗೆ ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಂಡಿದ್ದು ಪ್ರಸ್ತುತ ಲೈನಿಂಗ್ ಕಾಮಗಾರಿ ನಡೆಯುತ್ತಿದೆ.

670 ಮೀ ನಷ್ಟು ಸುರಂಗ ಕೊರೆಯಿವ ಕಾಮಗಾರಿ ಬಾಕಿಯಿದೆ. ಸುರಂಗ ಮಾರ್ಗದ 4.15 ಮೀ ನಷ್ಟು ಸಿ.ಸಿ ಲೈನಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಯೋಜನೆಯಲ್ಲಿ 13.35 ಕಿ.ಮೀ ಉದ್ದದ ಪೈಪ್ ಲೈನ್ ಇದ್ದು. ಇದರಲ್ಲಿ 5.5 ಕಿ.ಮೀ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!