ಪ.ಜಾತಿ ಒಳಮೀಸಲಾತಿ ಸಮೀಕ್ಷೆಗೆ ಸ್ಪಷ್ಟ ದತ್ತಾಂಶ ನೀಡಿ ಸಹಕರಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

Provide clear data and cooperate with the P.C. internal reservation survey: Deputy Commissioner A.B. Basavaraju

ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ಅವರಿಗೆ ಸ್ಪಷ್ಟ ದತ್ತಾಂಶ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು (A.B. Basavaraju) ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಚರ್ಚಿಸಲು ದಲಿತಪರ, ಪ್ರಗತಿ ಸಂಘಟನೆಗಳಿಗೆ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿಗಳನ್ನು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ನಡೆಸುತ್ತಿದೆ. ಹಾಗಾಗಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳು ತಮ್ಮ ಆಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ನಂಬರ್ ನೊಂದಿಗೆ ಅವರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟ ದತ್ತಾಂಶ ನೀಡಬೇಕು.

ಸಂವಿಧಾನದ 341ನೇ ವಿಧಿಯ ಅಡಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ 101 ಜಾತಿಗಳನ್ನು ಗುರುತಿಸಲಾಗಿದೆ. ಈ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು ಸಂಗ್ರಹಿಸಲು ಸಮೀಕ್ಷೆ ನಡೆಸಲಾಗುತ್ತಿದೆ. ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ ಸೇರಿದಂತೆ ಉಪಜಾತಿಗಳ ವೈಜ್ಞಾನಿಕ ಮಾಹಿತಿ ತಿಳಿಯಬೇಕಿದೆ. 101 ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕೊಡುವಾಗ ನಿರ್ದಿಷ್ಟ ಅಂಕಿ ಅಂಶಗಳು ಬೇಕಾಗುತ್ತವೆ ಎಂದರು.

ಮೂರು ಹಂತದಲ್ಲಿ ವೈಜ್ಞಾನಿಕ ಸಮೀಕ್ಷೆ

ಗಣತಿದಾರರು ಇವತ್ತಿನಿಂದ 17 ರವರೆಗೆ ಮನೆ ಮನೆಗೆ ಹೋಗಿ ದತ್ತಾಂಶ ಸಂಗ್ರಹಿಸುವರು. ಜಿಲ್ಲೆಯಲ್ಲಿ ಸಮೀಕ್ಷೆಗಾಗಿಯೇ 1141 ಶಿಕ್ಷಕರನ್ನು ನಿಯೋಜಿಸಲಾಗಿದೆ. 10-12 ಮಂದಿ ಶಿಕ್ಷಕರಿಗೆ ಒಬ್ಬ ಮೇಲ್ವಿಚಾರಕ ಇರುತ್ತಾರೆ. ಎಲ್ಲ ಗಣತಿದಾರರಿಗೆ ತರಬೇತಿಯನ್ನು ನೀಡಲಾಗಿದೆ. ಎರಡನೇ ಹಂತದಲ್ಲಿ ಮೇ 19 ರಿಂದ 21 ರವರೆಗೆ ವಿಶೇಷ ಶಿಬಿರಗಳಲ್ಲಿ ಮತಗಟ್ಟೆವಾರು ಸಮೀಕ್ಷೆ ನಡೆಯಲಿದೆ.

ಈ ಸಂದರ್ಭದಲ್ಲಿ ಯಾರಾದರೂ ಬಿಟ್ಟು ಹೋಗಿದ್ದರೆ ಶಿಬಿರಕ್ಕೆ ಬಂದು ಸೇರಿಸಬಹುದು. ಮೂರನೇ ಹಂತದಲ್ಲಿ ಮೇ 19 ರಿಂದ 22 ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹಿಸಲಾಗುವುದು.

ಮೊಬೈಲ್ ಆಪ್ ಮೂಲಕ ಸಮೀಕ್ಷೆ

ಮೊಬೈಲ್ ಆಪ್ ಮೂಲಕ ಆನ್ಲೈನ್ ಸಮೀಕ್ಷೆ ನಡೆಸಲಾಗುವುದು. ಗಣತಿದಾರರು ಬೆಳಗ್ಗೆ 6:30 ರಿಂದ ಸಂಜೆ 6:30 ರವರೆಗೆ ಸಮೀಕ್ಷೆ ನಡೆಸುವರು. ಆ ಸಂದರ್ಭದಲ್ಲಿ ಮಾತ್ರ ಮೊಬೈಲ್ ಆಪ್ ಗೆ ಲಾಗಿನ್ ಸಿಗಲಿದೆ.

ಆದ್ದರಿಂದ ದತ್ತಾಂಶ ಸಂಗ್ರಹ ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯ ಎಲ್ಲರೂ ಪೂರ್ಣವಾಗಿ ತೊಡಗಿಸಿಕೊಂಡು ಗಣತಿದಾರರು ಕೇಳುವಂತಹ ದತ್ತಾಂಶಕ್ಕೆ ಸ್ಪಷ್ಟ ಮಾಹಿತಿ ಕೊಡಿ.

ಸಮೀಕ್ಷೆಯಲ್ಲಿ ಸಂಘಟನೆಗಳ ಪಾತ್ರ ಬಹಳ ಮುಖ್ಯವಾಗಿದ್ದು, ಆಯಾ ಪ್ರಾಂತ್ಯದ, ವಾರ್ಡ್ ಗಳಲ್ಲಿ ಪ.ಜಾತಿ ಜನರಿಗೆ ಸಮೀಕ್ಷೆ ಬಗ್ಗೆ ವಿವರಿಸಿ ಗಣತಿದಾರರು ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಸಮೀಕ್ಷೆಗೆ ಸ್ಪಷ್ಟ ಮಾಹಿತಿ ನೀಡಲು ಸಂಘಟನೆಗಳ ಮುಖಂಡರನ್ನು ಕೋರಿದರು.

ಗೊಂದಲಗಳಿಗೆ ಕಿವಿ ಕೊಡಬೇಡಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಅವರು ಮಾತನಾಡಿ, ಸಮೀಕ್ಷೆಯಲ್ಲಿ ಮನೆ, ಕಾರು, ಬೈಕ್, ಜಮೀನು, ಉದ್ಯೋಗದ ಬಗ್ಗೆ ಮಾಹಿತಿ ನೀಡಿದರೆ ಸರ್ಕಾರದಿಂದ ಸಿಗುವ ಸೌಲಭ್ಯ ನಿಲ್ಲಿಸುತ್ತಾರೆ ಎನ್ನುವ ತಪ್ಪು ತಿಳುವಳಿಕೆ ಇದೆ.

ಸಮೀಕ್ಷೆಗೆ ಮಾಹಿತಿ ನೀಡುವುದರಿಂದ ಯಾವುದೇ ರೀತಿಯ ಸೌಲಭ್ಯ ಕಡಿತಗೊಳಿಸುವುದಿಲ್ಲ. ಹಾಗಾಗಿ ಯಾವುದೇ ಗೊಂದಲಕ್ಕೆ ಈಡಾಗದೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡಿ ಎಂದರು.

ಈ ಒಳ ಮೀಸಲಾತಿ ಸಮೀಕ್ಷೆಯು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅಭಿವೃದ್ಧಿಗೆ ಮುನ್ನುಡಿ ಆಗಿದ್ದು, ಇದೊಂದು ಮಹತ್ವದ್ದಾಗಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ ಸಾರ್ವಜನಿಕರು, ಮುಖಂಡರು, ಸಂಘಟನೆಗಳು ಸಹಕಾರ ನೀಡಿ ಸಮೀಕ್ಷೆಯನ್ನು ಯಶಸ್ಸ್ವಿಗೊಳಿಸಬೇಕು ಎಂದರು.

ಸಹಾಯವಾಣಿ ಸಂಪರ್ಕಿಸಿ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಮಟ್ಟದ ಸಮಾಜ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ:9482300400 ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್, ರವರ ವಿಚಾರಣಾ ಆಯೋಗ ಸಹಾಯವಾಣಿ :9481359000 ಸಂಪರ್ಕಿಸಬಹುದಾಗಿದೆ.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘JDS 25’ ಸಂಭ್ರಮ: ಭಿನ್ನಮತ ಶಮನ

ಜೆಡಿಎಸ್‌ನ (JDS) ಹಿರಿಯ ಮುಖಂಡ ಹುಸ್ಕೂರು ಆನಂದ್ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು, ಭಿನಮತ ಶಮನವಾಗಿರುವ ಮಾಹಿತಿ ತಿಳಿದು ಬಂದಿದೆ.

[ccc_my_favorite_select_button post_id="121822"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]