HDK ಆರೋಗ್ಯ ಸಮಸ್ಯೆ ವದಂತಿ; ನಿಖಿಲ್ ಕುಮಾರಸ್ವಾಮಿ ಮಹತ್ವದ ಮಾಹಿತಿ

Rumors of HDK's health problems; Nikhil Kumaraswamy gives important information

ಮಂಡ್ಯ: ಕುಮಾರಣ್ಣ (HD Kumaraswamy) ಅವರು ಆರೋಗ್ಯವಾಗಿದ್ದಾರೆ, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ.ಯಾರು ಕೂಡ ಆತಂಕ ಪಡಬೇಕಾಗಿಲ್ಲ, ಆದರೆ ಎರಡು ವಾರಗಳ ಕಾಲ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ಪರವಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ ಯಾರು ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತಿಳಿಸಿದರು.

ಜಿಲ್ಲೆಯ ಬೆಟ್ಟಹಳ್ಳಿ ಗ್ರಾಮದಲ್ಲಿ ಸೋಮೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮತ್ತು ಶಿಖರ ಕಳಸ ಪ್ರತಿಷ್ಠಾಪನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಮಾರಣ್ಣ ಅರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಸೋಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಒಂದು ಮಾತನ್ನು ತಿಳಿಸುತ್ತೇನೆ. ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ಜೊತೆಯಲ್ಲಿ ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಕುಮಾರಣ್ಣ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೂರು ವಿದ್ಯುತ್ ಉತ್ಪಾದಕ ಘಟಕಗಳನ್ನು ಮತ್ತು ನೀರಾವರಿಗೆ 200 ಕೋಟಿಗೂ ಹೆಚ್ಚು ಅನುದಾನವನ್ನು ನೀಡಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಕುಮಾರಣ್ಣ ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಎಂದು ಅವರು ತಿಳಿಸಿದರು.

ನಂತರ ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದು ಸಾವನ್ನಪ್ಪಿದ ಪಾಪಣ್ಣಚಾರಿ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.

ಇದೇ ವೇಳೆ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ.ಡಾ.ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ದಿವ್ಯಸಾನ್ನಿಧ್ಯದಲ್ಲಿ ಮಾಜಿ ಸಚಿವರಾದ ಸಿ. ಎಸ್ ಪುಟ್ಟರಾಜು ಅವರು, ಮನ್ಮುಲ್ ಮಾಜಿ ಅಧ್ಯಕ್ಷರಾದ ರಾಮಚಂದ್ರು ಅವರು ಮುಖಂಡರಾದ ಶಂಕರೇಗೌಡ ಅವರು ಸೇರಿದಂತೆ ಅನೇಕ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]