ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ಆಶಯ ಸಾಕಾರಗೊಳ್ಳಬೇಕಿದೆ: ಡಿ.ಶ್ರೀಕಾಂತ್

The wishes of the esteemed people who built and nurtured the Kannada Sahitya Parishad need to be realized: D. Srikanth

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದ ಮಹನೀಯರ ಆಶಯ ಸಾಕಾರಗೊಂಡಾಗ ಮಾತ್ರ ಕನ್ನಡ ಭಾಷೆ, ಸಾಹಿತ್ಯ,
ಮತ್ತು ಸಂಸ್ಕೃತಿ ಸಂವರ್ಧನೆಗೊಳ್ಳುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ (D.Srikanth) ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ   ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ಕನ್ನಡ ನಾಡಿನ ಸಾಂಸ್ಕೃತಿಕ ಇತಿಹಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಹತ್ವ ಸ್ಥಾನವಿದೆ. ಮೊದಲಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ನಂತರ ಕನ್ನಡ ಸಾಹಿತ್ಯ ಪರಿಷತ್ತು ಎಂಬ ಹೆಸರು ಪಡೆದ ಈ ಸಂಸ್ಥೆಗೆ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಅಪಾರವಾಗಿದೆ ಎಂದರು.

ಕನ್ನಡ ನಾಡು,ನುಡಿ ಮತ್ತು ಕನ್ನಡಿಗರ ಬದುಕಿನ ವಿಚಾರಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರ್ವಹಿಸಬೇಕಾಗಿದೆ. ನಮ್ಮ ರಾಜ್ಯದಲ್ಲಿ ನೆಲೆಸುವ ಅನ್ಯ ಭಾಷಿಕರಿಗೆ ಕನ್ನಡ ಕಲಿಸುವ ಯೋಜನೆ ರೂಪಿಸಬೇಕಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಕನ್ನಡ ರತ್ನ, ಕಾವ್ಯ, ಜಾಣ ಪರೀಕ್ಷೆಯ ಬಗ್ಗೆ ಪ್ರಚಾರ ಮಾಡುವುದು ಮತ್ತು ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಬೇಕಾಗಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಮಹತ್ವದ ಕವಿಗಳ ಕೃತಿಗಳ ಹಕ್ಕು ಸ್ವಾಮ್ಯ ಹೊಂದಿದೆ. ಕನ್ನಡ ನಿಘಂಟು ರಚನೆ ಮತ್ತು ಪರಿಷ್ಕರಣೆಯಲ್ಲಿ ಮಹತ್ವದ ಸಾಧನೆ  ಮಾಡಿದೆ.

ಉತ್ತಮ ಗ್ರಂಥಾಲಯ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆಯ ಬೆಳವಣಿಗೆಗೆ, ಅಧ್ಯಯನ ಮತ್ತು‌ ಸಂಶೋಧನೆಗೆ ಸಹಕಾರಿಯಾಗಿದೆ. ಇದರ ಸದುಪಯೋಗ ಕನ್ನಡಿಗರಿಗೆ ತಲುಪಬೇಕಾಗಿದೆ.‌

ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಪ್ರಕಟಣೆಯಲ್ಲಿ ಬದಲಾವಣೆ ಆಗಬೇಕಾಗಿದೆ.‌ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಿದಾಗ ಮಾತ್ರ ಅದು ಜನಸಾಮಾನ್ಯರ ಪರಿಷತ್ತು ಆಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಇಸ್ತೂರು  ಕೋದಂಡರಾಮ ಭಜನಾ ಮಂಡಲಿ  ಕಾರ್ಯದರ್ಶಿ ರಂಗಸ್ವಾಮಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ.

ಕನ್ನಡಪರ ಸಂಘಟನೆಯ ದೊಡ್ಡಹೆಜ್ಜಾಜಿ ಮೂರ್ತಿ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ‌ಮಹಾದೇವ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು, ಕಸಬಾ ಹೋಬಳಿ ಕಸಾಪ ಘಟಕದ ಅಧ್ಯಕ್ಷ ದಾದಾಪೀರ್,  ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ ನಾಗರತ್ನಮ್ಮ, ಷಫೀರ್, ಸೂರ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯ  ಎಂ.ಸಿ.ಮಂಜುನಾಥ್,  ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]