ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿ (Accident) ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದ ಫಾಕ್ಸ ಕಾನ್ ಸಮೀಪ ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದ ಚೆನ್ನಕೇಶವ (22 ವರ್ಷ) ಮೃತ ದುರ್ದೈವಿ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಫಾಕ್ಸ ಕಾನ್ ಕಂಪನಿಯಿಂದ ಗೆಳತಿಯನ್ನು ಕರೆತರಲು ಹೋಗಿ ಬರುವ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಈ ಕುರಿತಂತೆ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.