ಚಿಕ್ಕಬಳ್ಳಾಪುರ: ತಾಲೂಕಿನ ಮಂಚನಬಲೆ ಗ್ರಾಮದ ಸೌಮ್ಯ (Saumya) ಎಂಬ 20 ವರ್ಷದ ಯುವತಿ ಪ್ರಥಮ ಪಿಯುಸಿ ಮುಗಿಸಿ ಶಿಡ್ಲಘಟ್ಟ ತಾಲ್ಲೂಕಿನ ಬಚ್ಚಹಳ್ಳಿ ಅವರ ಅಕ್ಕನ ಮನೆಗೆ ಹೋಗಿದ್ದು, ಅಲ್ಲಿಂದ ಯಾರಿಗೂ ಹೇಳದೆ ಹೊರಟು ಹೋಗಿರುತ್ತಾರೆ (Missing).
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಹೆಸರು ಸೌಮ್ಯ, 20 ವರ್ಷ ವಯಸ್ಸು, 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಗೋದಿ ಮೈಬಣ್ಣ, ಕಪ್ಪುಬಣ್ಣದ ಟಾಪ್ ಮತ್ತು ಪ್ಯಾಂಟ್ ಧರಿಸಿದ್ದು, ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.
ಈಕೆಯ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.