Another shock for BJP leader Gali Janardhana Reddy..!

ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ..!

ಹೈದರಾಬಾದ್: ಓಬಳಾಪುರ ಗಣಿಗಾರಿಕೆ ಪ್ರಕರಣದ (ObulapuramMiningCase) ಆರೋಪಿ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರನ್ನು ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬರೋಬ್ಬರಿ 884 ಕೋಟಿ ರೂಪಾಯಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್‌ ಜನಾರ್ಧನ ರೆಡ್ಡಿ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.

ನ್ಯಾಯಾಲಯದ ಆದೇಶದ ಬೆನ್ನಲ್ಲೇ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದ್ದು, ನಾಳೆ ಅವರ ಪರ ವಕೀಲರು ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

7 ವರ್ಷ ಶಿಕ್ಷೆಗೆ ಒಳಗಾದವರು: ಗಾಲಿ ಜನಾರ್ದನ ರೆಡ್ಡಿ, ಬಿ ವಿ ಶ್ರೀನಿವಾಸ ರೆಡ್ಡಿ, ವಿಡಿ ರಾಜಗೋಪಾಲ್, ಮೆಫಾಜ್ ಅಲಿ ಖಾನ್.

ಉಳಿದಂತೆ ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಮತ್ತು ಮಾಜಿ ಐಎಎಸ್ ಅಧಿಕಾರಿ ಕೃಪಾನಂದಂ ಅವರನ್ನು ಈ ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿದೆ.

ಅನರ್ಹತೆ ಭೀತಿ; ಕೋರ್ಟ್ ತೀರ್ಪಿನಿಂದಾಗಿ ಜನಾರ್ದನ ರೆಡ್ಡಿ ಅವರು ಪ್ರಜಾಪ್ರತಿನಿಧಿ ಕಾಯಿದೆಯ ಪ್ರಕಾರ ಶಾಸಕ ಸ್ಥಾನದಿಂದ ಅನರ್ಹರಾಗಬೇಕಾಗುತ್ತದೆ.

ನಾಲ್ಕು ವರ್ಷಗಳಿಗಿಂತ ಹೆಚ್ಚಿನ ಶಿಕ್ಷೆಯಾದರೆ ಶಾಸಕ ಸ್ಥಾನ ಅನರ್ಹವಾಗಲಿದೆ. ಜೊತೆಗೆ ಮುಂದಿನ 6 ವರ್ಷಗಳ ಕಾಲ ಅಪರಾಧಿ ಚುನಾವಣೆಗೂ ಸ್ಪರ್ಧಿಸುವಂತಿಲ್ಲ.

ಪ್ರಕರಣದ ಹಿನ್ನೆಲೆ

ಆಂಧ್ರಪ್ರದೇಶದಲ್ಲಿ ವೈ.ಎಸ್‌ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು.

ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು.

ಗಣಿ‌ಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ‌ ಇಲಾಖೆಯಿಂದ ಅಕ್ರಮ‌ ಆಗಿದೆ ಎಂದು ಆರೋಪಿಸಲಾಗಿತ್ತು.

ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಜನಾರ್ಧನ ರೆಡ್ಡಿ ಅವರ ಮೇಲಿದೆ.

ರಾಜಕೀಯ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ ಮತದಾರರ ವಿವರ ಪ್ರಕಟ

ಸುಪ್ರೀಂ ಕೋರ್ಟ್ ಆದೇಶಕ್ಕೆ ಮಣಿದ ಚುನಾವಣೆ ಆಯೋಗ: ಡಿಲೀಟ್ ಆಗಿದ್ದ 65 ಲಕ್ಷ

ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾದ ಆದೇಶದ ನಂತರ ಬಿಹಾರದಲ್ಲಿ ಕರಡು ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ (Election Commission) ಬಿಡುಗಡೆ ಮಾಡಿದೆ.

[ccc_my_favorite_select_button post_id="112766"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!