H.D. Deve Gowda declares full support to Prime Minister Modi in combating terrorism

ಭಯೋತ್ಪಾದನೆ ನಿಗ್ರಹ; ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದ ಕೈಗೊಳ್ಳುತ್ತಿರುವ ಎಲ್ಲಾ ಕ್ರಮಗಳನ್ನು ಮುಕ್ತಕಂಠದಿಂದ ಬೆಂಬಲಿಸುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರು (HD Deve Gowda) ಘೋಷಿಸಿದರು.

ಈ ಬಗ್ಗೆ ನವದೆಹಲಿಯಲ್ಲಿ ಮಂಗಳವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಪೆಹಲ್ಗಾಮ್ ಘಟನೆ ಅಮಾನವೀಯ. ಮೊದಲ ಬಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಇದು ಅತ್ಯಂತ ಹೇಯ. ಈ ಕೆಲಸ ಮಾಡಿದವರಿಗೆ ತಕ್ಕ ಶಾಸ್ತಿ ಆಗಲೇಬೇಕು.

ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ರಕ್ಷಣಾ ಪಡೆಗಳಿಗೆ ಮೋದಿ ಅವರು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಮೊದಲ ಬಾರಿಗೆ ದೇಶದ ಪ್ರಧಾನಿ ಮೋದಿ ಅವರು ಇಂತಹ ದಿಟ್ಟ ನಿರ್ಧಾರ ಮಾಡಿದ್ದಾರೆ.

ಇತಿಹಾಸದಲ್ಲಿ ಈ ರೀತಿ ಎಂದೂ ನಿರ್ಧಾರ ಆಗಿರಲಿಲ್ಲ ಎಂದ ಮಾಜಿ ಪ್ರಧಾನಿಗಳು, ಗೃಹ, ರಕ್ಷಣೆ ಹಾಗೂ ವಿದೇಶಾಂಗ ಖಾತೆಗಳನ್ನು ನಿಭಾಯಿಸುತ್ತಿರುವ ಸಚಿವರುಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಡೀ ದೇಶ ಪ್ರಧಾನಿ ಮೋದಿಯವರ ಜೊತೆ ನಿಂತಿದೆ. ಎಲ್ಲಾ ರಾಜಕೀಯ ಪಕ್ಷಗಳು ಮೋದಿಯವರ ನಿರ್ಧಾರವನ್ನು ಬೆಂಬಲಿಸಿವೆ. ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಬೇಕಾಗಿದೆ. ಪಾಕಿಸ್ತಾನ ಪ್ರೇರಿತ ಉಗ್ರರನ್ನು ಸದೆಬಡಿಯುವವರೆಗೆ ವಿರಮಿಸುವುದಿಲ್ಲ ಎಂದು ಮೋದಿ‌ ಹೇಳಿದ್ದಾರೆ. ನಾನು, ನಮ್ಮ ಪಕ್ಷ ಇಡಿ ದೇಶ ಪ್ರಧಾನಿ ಮೋದಿ ಜೊತೆಗಿರುತ್ತೇವೆ ಎಂದು ದೇವೇಗೌಡರು ಹೇಳಿದರು.

1971ರ ಯುದ್ಧ ಕಾಲಕ್ಕೂ ಈಗಿನ ಪರಿಸ್ಥಿತಿಗೂ ಬಹಳ ವ್ಯತ್ಯಾಸವಿದೆ. ಹೋಲಿಕೆ ಮಾಡಲು ಸಾಧ್ಯವಿಲ್ಲ. ಭಾರತ ಅಗಾಧವಾಗಿ ಬೆಳೆದಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ, ಬದಲಾವಣೆಯನ್ನು ಕಂಡಿದೆ ಎಂದ ಅವರು; ಇಲ್ಲಿ ಹಿಂದೂ ಮುಸ್ಲಿಂ ಎನ್ನುವ ಪ್ರಶ್ನೆಯಲ್ಲ. ಧರ್ಮ, ಜಾತಿ ಪ್ರಶ್ನೆ ಉದ್ಭವವಾಗುದಿಲ್ಲ.

ದೇಶದ ಭದ್ರತೆ ಮುಖ್ಯ. ಯುದ್ಧ ಮಾಡಬೇಕೋ ಬೇಡವೋ ಎನ್ನುವ ನಿರ್ಧಾರವನ್ನು ಸೇವೆಗೆ ಬಿಡಲಾಗಿದೆ. ಮೂರು ಸೇನೆಗಳ ಮುಖ್ಯಸ್ಥರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಜಾತಿ ಗಣತಿ; ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ವಾಗ್ದಾಳಿ

ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಮುಂದಿನ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನು ಮಾಡುತ್ತಿರುವುದು ಸ್ವಾಗತಾರ್ಹ ಎಂದು ಮಾಜಿ ಪ್ರಧಾನಿಗಳಾದ ದೇವೇಗೌಡರು ಹೇಳಿದರು.

ಕೇಂದ್ರ ನಿಲುವಿಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕರ್ನಾಟಕ ದ ಜಾತಿಗಣತಿಗೆ ಸಿದ್ದರಾಮಯ್ಯ ಅವರ ಸಂಪುಟದಲ್ಲಿಯೇ ಸಹಮತ ಇಲ್ಲ. ಈ ಬಗ್ಗೆ ಸಿದ್ದರಾಮಯ್ಯ ಅವರಿಗೆ ನಾನು ಪತ್ರ ಬರೆದಿದ್ದೆ. ನನಗೆ ಅವರು ಈವರೆಗೆ ಉತ್ತರ ಕೊಟ್ಟಿಲ್ಲ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಾರೆ. ಹಾಗಾದರೆ ಸಿಎಂ ಕಚೇರಿಯಲ್ಲಿ ಎಷ್ಟು ಹಿಂದುಳಿದವರು ಇದ್ದಾರೆ? ಸಿಎಂ ಕಚೇರಿಯಲ್ಲಿ ಎಷ್ಟು ಅವರದ್ದೆ ಸಮುದಾಯದ ಉದ್ಯೋಗಿಗಳು ಎಷ್ಟಿದ್ದಾರೆ? ಎನ್ನುವುದನ್ನು ಹೇಳಬೇಕು. ಅವರು ಹೇಳುತ್ತಾರೆಯೇ? ಅಂತಹ ಸಿದ್ದರಾಮಯ್ಯನವರು ಮೋದಿ ಅವರಿಗೆ ಪಾಠ ಮಾಡುತ್ತಾರೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಜಾತಿ ಸಮೀಕ್ಷೆಯ ಮೂಲಕ ಬೆಣ್ಣೆ ತಿಂದು, ಉಳಿದವರಿಗೆ ನೀರು ಮಜ್ಜಿಗೆ ಕೊಡಲು ಸಿದ್ದರಾಮಯ್ಯ ಹೊರಟಿದ್ದಾರೆ. ಇದು ಸರಿಯಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!