International cricket stadium in Tumkur..!

ಗುಡ್ಮಾರ್ನಿಂಗ್ ನ್ಯೂಸ್: RCBಗೆ ಕಾಡಿದ ಚಿನ್ನಸ್ವಾಮಿ.. ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಚನ್ನಪಟ್ಟಣದಲ್ಲೂ ಸ್ಟೇಡಿಯಂ..!

ಬೆಂಗಳೂರು: ತುಮಕೂರಿನ (Tumkur) ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B.Patil) ಸೋಮವಾರ ಇಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಈ ಮನವಿಯ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ತುಮಕೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಬರಬೇಕಾದ ಅಗತ್ಯವಿದೆ ಎಂದರು.

ಬೆಂಗಳೂರಿಗೆ ತಾಗಿಕೊಂಡಿರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಅಲ್ಲಿ ಒಂದು ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಕೂಡ ಹೇಳುತ್ತಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ನಗರದ ಮಧ್ಯಭಾಗದಲ್ಲಿದೆ. ಹೀಗಾಗಿ ಇಲ್ಲಿ ಪಾರ್ಕಿಂಗ್, ಸಂಚಾರ ದಟ್ಟಣೆ ಇತ್ಯಾದಿ ಸಮಸ್ಯೆಗಳಿವೆ. ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗಲಿವೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವಿಜಯಪುರದಲ್ಲೂ ಇಂಥದ್ದೊಂದು ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ ಎಂದು ಪಾಟೀಲ ನುಡಿದಿದ್ದಾರೆ.

ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ರೂ.15 ಲಕ್ಷದಂತೆ ನೀಡಲಾಗಿದೆ ಎಂದು ಪಾಟೀಲ ಹೇಳಿದರು.

ಕಾರ್ಯಕ್ರಮದಲ್ಲಿ ಕೆಎಸ್ಸಿಎ ಅಧ್ಯಕ್ಷ ರಘುರಾಮ್ ಭಟ್ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಚನ್ನಪಟ್ಟಣ ಸ್ಟೇಡಿಯಂ ನಿರ್ಮಾಣಕ್ಕೆ ಡಿಸಿಎಂ ಪ್ರಸ್ತಾವನೆ.

“ಚನ್ನಪಟ್ಟಣದಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಭರವಸೆ ನೀಡಿದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿದ್ದರಾಮಯ್ಯ ಅವರು ಸೋಮವಾರ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಚನ್ನಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ, ವಿಧಾನಸಭೆ ಕ್ಷೇತ್ರದ ವಿಶೇಷ ಅನುದಾನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತಿದ್ದ ಡಿಸಿಎಂ ಅವರು ಜೂಮ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚನ್ನಪಟ್ಟಣ ಸ್ಟೇಡಿಯಂ ನಿರ್ಮಾಣ ಪ್ರಸ್ತಾಪ ಮಾಡಿದರು. ನೆರವು ನೀಡುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಸಿಎಂ ಅವರು “ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು” ಎಂದರು.

ಚನ್ನಪಟ್ಟಣ ಉಪಚುನಾವಣೆಗೆ ಮುಂಚಿತವಾಗಿ ತಟ್ಟೆಕೆರೆಯ ಬಳಿ ಕ್ರೀಡಾಂಗಣಕ್ಕೆ ಶಿವಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!