ಪಹಲ್ಗಾಮ್ ಉಗ್ರರ ದಾಳಿ; ಕಾಂಗ್ರೆಸ್ ನಾಯಕರ ಆರೋಪಗಳಿಗೆ ಸಂಸದ ಬಸವರಾಜ ಬೊಮ್ಮಾಯಿ ಆಕ್ಷೇಪ

Pahalgam terrorist attack; MP Basavaraj Bommai objects to Congress leaders' allegations

ಬೆಂಗಳೂರು: ನಮ್ಮ ದೇಶದ ಮೇಲೆ ಭಯೋತ್ಪಾದನೆಯ ದಾಳಿ ನಡೆದ ಸಂದರ್ಭದಲ್ಲಿ ಭಾರತ ಪಾಕ್ ನಡುವೆ ಯುದ್ದದ ಕಾರ್ಮೋಡ ದಟ್ಟವಾಗಿರುವಾಗ ಕಾಂಗ್ರೆಸ್ ನ ಹಿರಿಯ ನಾಯಕರ ಹೇಳಿಕೆ ನೋಡಿದಾಗ ಇವರು ಈ ದೇಶವನ್ನು 55 ವರ್ಷ ಆಳಿದ್ದಾರೊ ಇಲ್ಲವೊ ಎಂಬ ಸಂಶಯ ಮೂಡುತ್ತದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟ ವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಚೀನಾ ಯುದ್ದದಲ್ಲಿ ಭಾರತಕ್ಕೆ ಸೋಲುಂಟಾಗಿರುವುದು ಮತ್ತು ಭಾರತದಲ್ಲಿ ಮುಂಬೈ, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಹಲವಾರು ಕಡೆ ಭಯೋತ್ಪಾದಕ ದಾಳಿಗಳು ನಡೆದಾಗ ಕ್ರಮ ತೆಗೆದುಕೊಳ್ಳದಿರುವುದು, ಮುಂಬೈ ಮೇಲೆ 2008 ರಲ್ಲಿ ನಡೆದ 26/11 ದಾಳಿಯಲ್ಲಿ 130 ಅಮಾಯಕರ ಸಾವುಂಟಾದಾಗ ಘಟನೆ ಪೂರ್ವದಲ್ಲಿ ಇಂಟಲಿಜೆನ್ಸ್ ವೈಫಲ್ಯ ಆಗಿದ್ದು, ಘಟನೆ ನಂತರ ಉಗ್ರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ತೀರ್ಮಾನ ತೆಗೆದುಡಿದ್ದನ್ನು ಕಾಂಗ್ರೆಸ್ ನಾಯಕರು ಮರೆತಂತಿದೆ.

ಕನಿಷ್ಠ ಅವರ ಪ್ರಧಾನಮಂತ್ರಿ ಇಂದಿರಾ ಗಾಂಧಿ ಯುದ್ದ ಮಾಡುವಾಗ ಅಂದಿನ ಸೇನೆಯ ಮುಖ್ಯಸ್ಥ ಮಾಣಿಕ್ ಷಾ ಅವರ ಮಾತು ಹೇಗೆ ಕೇಳಿದರೊ ಆ ಸಂದರ್ಭದಲ್ಲಿ ಎಲ್ಲ ವಿರೋದ ಪಕ್ಷಗಳು ಸರ್ಕಾರದ ಪರವಾಗಿ ನಿಂತಿರುವುದು ನೆನಪಿನಲ್ಲಿ ಇಷ್ಟುಕೊಳ್ಳದೆ ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷದ ರಾಷ್ಟ್ರ ಪ್ರೇಮ ಅಧಪತನವಾಗಿರುವುದು ಸ್ಪಷ್ಟವಾಗಿದೆ.

ಇಂಥ ಸಂದರ್ಭದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಬರುವ ದಿನಗಳಲ್ಲಿ ಜನರಿಗೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲ ಆಯಾಮಗಳನ್ನು ಮನಗಂಡು ಯುದ್ದಕ್ಕೆ ಬೇಕಾಗಿರುವ ತಯಾರಿ ಮಾಡಿ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಣಯ ತೆಗೆದುಕೊಳ್ಳಲು ಈಗಾಗಲೇ ಮೂರು ಸೇನಾಪಡೆಗಳಿಗೆ ಅಧಿಕಾರ ಕೊಟ್ಡಿರುವುದು ನಾವೆಲ್ಲ ನೋಡಿದ್ದೇವೆ.

ಇಡೀ ರಾಷ್ಟ್ರ ಒಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನಿಲ್ಲುವುದು ಕರ್ತವ್ಯ. ಕಾಂಗ್ರೆಸ್ ಕನಿಷ್ಠ ಜವಾಬ್ದಾರಿಯನ್ನಾದರೂ ಅರ್ಥಮಾಡಿಕೊಳ್ಳಲಿ. ಅವರ ಪ್ರತಿಯೊಂದು ಹೇಳಿಕೆಗಳಿಂದ ಪಾಕಿಸ್ತಾನಕ್ಕೆ ಪುಷ್ಠಿ ಕೊಡುತ್ತಿರುವುದು ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]