ಬೆಂಗಳೂರು: ಒಂದು ನೇಮಕಾತಿ ಪರೀಕ್ಷೆಯನ್ನ ನೆಟ್ಟಗೆ ನಡೆಸಲು ‘ಕೈ’ಲಾಗದಿರುವ ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು? ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashoka) ಕಿಡಿಕಾರಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.
ಈಗ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆ ಎರಡು ದಿನಗಳ ಮುಂಚೆಯೇ ಸೋರಿಕೆ ಆಗಿತ್ತು ಎನ್ನುವ ಸುದ್ದಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಮರ್ಮಾಘಾತ ನೀಡಿದೆ.
ಸಿಎಂ ಸಿದ್ದರಾಮಯ್ಯ ನವರೇ, ಒಂದು ಸ್ಪರ್ಧಾತ್ಮಕ ಪರೀಕ್ಷೆಯನ್ನ ನೆಟ್ಟಗೆ ನಡೆಸಲಾಗದ ತಾವು ಯಾವ ಸೀಮೆ ಮುಖ್ಯಮಂತ್ರಿ ಸ್ವಾಮಿ? ತಮ್ಮ ಕೈಯಲ್ಲಿ ಆಡಳಿತ ನಡೆಸುವುದು ಸಾಧ್ಯವಿಲ್ಲ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಈ ರೀತಿ ಪದೇ ಪದೇ ಯಾಕೆ ತೊಂದರೆ ಕೊಡುತ್ತೀರಿ? ಎಂದು ಕಿಡಿಕಾರಿದ್ದಾರೆ.