Scheduled Castes Survey

ಪರಿಶಿಷ್ಟ ಜಾತಿಗಳ ಸಮೀಕ್ಷೆ: ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲಯ ಎಂದು ನಮೂದಿಸಲು ಕರೆ

ದೊಡ್ಡಬಳ್ಳಾಪುರ: ಒಳಮೀಸಲಾತಿ ಗಣತಿಯಲ್ಲಿ (Scheduled Castes Survey) ಪರಿಶಿಷ್ಟಜಾತಿಯ ಬಲಗೈ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಹೊಲೆಯ ಎಂದು ನಮೂದಿಸುವ ಮೂಲಕ ರಾಜಕೀಯವಾಗಿ, ಆರ್ಥಿಕವಾಗಿ , ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ನಮ್ಮ ನಮ್ಮ ಹಕ್ಕನ್ನು ಪಡೆಯಲು ಸಹಕರಿಸಬೇಕೆಂದು ಸೋಣ್ಣಪ್ಪನಹಳ್ಳಿ ರಮೇಶ್ ಮನವಿ ಮಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮುದಾಯಗಳ ನೈಜ ಸ್ಥಾನ, ಅಭಿವೃದ್ಧಿ ತಿಳಿಯಲು ನಾಗಮೋಹನ್ ದಾಸ್ ಆಯೋಗದ ಮುಖೇನ ಸಮೀಕ್ಷೆಗೆ ಮುಂದಾಗಿದ್ದು, ಮನೆ ಬಾಗಿಲಿಗೆ ಬರುವ ಶಿಕ್ಷಕರ ಬಳಿ ಮೂಲ ಜಾತಿಯನ್ನು ಹೊಲಯ / ಛಲವಾದಿ ಎಂದು ಸ್ಪಷ್ಟವಾಗಿ ನಮೂದಿಸುವ ಮೂಲಕ ಸಮುದಾಯದ ಬಂಧುಗಳು ಸಹಕರಿಸಬೇಕು ಎಂದರು.

ಮುಖಂಡರಾದ ಗೂಳ್ಯ ಹನುಮಣ್ಣ ಮಾತನಾಡಿ, ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1 ರಲ್ಲಿ ಆಯಾ ರಾಜ್ಯಗಳಿಗೆ ದತ್ತಾಂಶದ ಮಾನದಂಡದ ಆಧಾರದ ಮೇಲೆ ಒಳಮೀಸಲು ಜಾರಿ ಮಾಡುವ ಅಧಿಕಾರವನ್ನು ನೀಡಿದ್ದು, ಈ ಹಿನ್ನಲೆ ರಾಜ್ಯ ಸರ್ಕಾರವು ಈ ಹಿಂದಿನ ಸರ್ಕಾರಗಳು ಮಾಡಿದ ಲೋಪಗಳನ್ನು ಸರಿಪಡಿಸುವ ಸಲುವಾಗಿ ಸಮೀಕ್ಷೆಗೆ ಮುಂದಾಗಿದೆ, ಸಮುದಾಯದ ಬಂಧುಗಳು ಈ ಸಮೀಕ್ಷೆಯಲ್ಲಿ ಪಾಲ್ಗೊಂಡು ಮೂಲ ಜಾತಿ ಯನ್ನು ಆದಿ ದ್ರಾವಿಡ ಅಥವಾ ಆದಿ ಕರ್ನಾಟಕ ಎಂದು ನಮೂದಿಸದೆ ಹೊಲಯ ಎಂದು ನಮೂದಿಸಬೇಕಿದೆ ಎಂದರು.

ಮುಖಂಡರಾದ ಮುನಿಯಪ್ಪ ಮಾತನಾಡಿ ನಮ್ಮ ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿದ್ದು, ಕೆಲ ದ್ವಂದ್ವಗಳಿಂದ ನಾವು ಹೆಚ್ಚಿದ್ದೇವೆ ಎಂಬ ಭಾವನೆ ಹಲವು ಸಮುದಾಯಗಳಲ್ಲಿ ಇದೆ, ಈ ಪ್ರಶ್ನೆಗೆ ಸೂಕ್ತ ಉತ್ತರವನ್ನು ಈ ಸಮೀಕ್ಷೆ ನೀಡುವ ಭರವಸೆ ಇದೆ ಎಂದರು.

ಈ ಸಮೀಕ್ಷೆಯನ್ನು ಸೂಕ್ತ ರೀತಿಯಲ್ಲಿ ನೆಡೆಸಿ ವರದಿ ಸಲ್ಲಿಕೆ ಮಾಡಲು ನ್ಯಾ. ನಾಗಮೋಹನ್ ದಾಸ್ ಅವರ ಅಯೋಗ ನೇಮಕ ಮಾಡಿದೆ. ಹಾಗಾಗಿ ಆಯಾ ಜಾತಿಗಳು ಮೂಲ ಜಾತಿಯನ್ನು ಸ್ಪಷ್ಟವಾಗಿ ನಮೂದು ಮಾಡಿಸಬೇಕು ಎಂದು ಸಮುದಾಯಗಳಲ್ಲಿ ಮನವಿ ಮಾಡುತ್ತೇನೆ ಎಂದರು.

ನಮ್ಮ ಹೊಲಯ ಸಮುದಾಯದಲ್ಲಿ 37 ಕ್ಕೂ ಅಧಿಕ ಉಪಜಾತಿಗಳಾಗಿದ್ದು, ಮೂಲ ಜಾತಿ ಕಾಲಂನಲ್ಲಿ ಹೊಲಯ ಅಥವಾ ಛಲವಾದಿ ಎಂದು ನಮೂದು ಮಾಡಿ ಎಂಬ ಮಾಹಿತಿಯನ್ನು ಪ್ರತಿ ಪಂಚಾಯತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಕರಪತ್ರ ತಲುಪಿಸಿ ಪ್ರಚಾರ ಮಾಡುವ ಮೂಲಕ ಜಾಗೃತಿ ಮೂಡಿಸಲಿದ್ದೇವೆ ಎಂದು ಮುಖಂಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಛಲವಾದಿ ಸಮುದಾಯದ ಮುಖಂಡರಾದ ಮುನಿಯಪ್ಪ, ಮರಿಯಪ್ಪ, ಮುನಿರಾಜು, ಕೊನಘಟ್ಟ ರಾಮಾಂಜಿನಪ್ಪ, ತಳಗವಾರ ಪುನೀತ್, ಕನ್ನಮಂಗಲ ರಮೇಶ್, ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ರಾಜಕೀಯ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ (Cmsiddaramaiah) ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="117898"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ..!

ಇದೇ ತಿಂಗಳ 15 ರಂದು ಕಾಣೆಯಾಗಿದ್ದ ಬಾಲಕನ ಶವ ತಾಲೂಕಿನ ತೂಬಗೆರೆ ಹೋಬಳಿಯ ಸಾಧುಮಠ ರಸ್ತೆಯ ಬಳಿ ಪತ್ತೆಯಾಗಿದೆ (Missing boy found dead)

[ccc_my_favorite_select_button post_id="117857"]
ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ದೊಡ್ಡಬಳ್ಳಾಪುರ: ಜೆಸಿಬಿಗೆ ಕಾರು ಡಿಕ್ಕಿ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದ ಜೆಸಿಬಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ಕಾರು ತೀವ್ರವಾಗಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿ ಗೇಟ್ ಬಳಿ ಕೆಲವೇ ಕ್ಷಣಗಳ ಮುಂಚೆ ಸಂಭವಿಸಿದೆ.

[ccc_my_favorite_select_button post_id="117905"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!