ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ

Counterfeit medicine.. Minister Dinesh Gundurao's important promise

ಬೆಂಗಳೂರು: ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.? ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.

ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?

ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.

ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ ಎಂದು ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]