Applications invited for Krushi Award and Krushi Panditha Award

ಪ್ರಥಮ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ ದೇವನಹಳ್ಳಿ ತಾಲ್ಲೂಕು ಹಾಗೂ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಗಿಡ್ಡಪ್ಪನಹಳ್ಳಿ ಹೊಸಕೋಟೆ ತಾಲ್ಲೂಕು ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ (PUC) ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಪ್ರಥಮ ಪಿಯುಸಿ (PUC) ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಸೀಟುಗಳು ಖಾಲಿ ಇದೆ.

ಯಾವುದೇ ವಸತಿ ಶಾಲೆ/ಸರ್ಕಾರಿ/ಅನುದಾನಿತ/ಅನುದಾನ ರಹಿತ/ಇತರೆ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅರ್ಹರಿರುತ್ತಾರೆ.

ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವಸತಿ, ಪಠ್ಯ ಪುಸ್ತಕ, ಆಹಾರ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್. ಲೇಖನ ಸಾಮಗ್ರಿ, ಕ್ರೀಡಾ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು.

ಅರ್ಜಿ ಸಲ್ಲಿಸುವರು ವಸತಿ ಶಾಲೆಯ ಅಧಿಕಾರಿ/ಸಿಬ್ಬಂದಿರವರನ್ನು ಸಂಪರ್ಕಿಸಿ ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ಮತ್ತು ಪ್ರಥಮ ಪಿ.ಯು.ಸಿ ಸಿ.ಇ.ಬಿ.ಎ (ವಾಣಿಜ್ಯ ವಿಭಾಗ) ತರಗತಿಗಳಿಗೆ ದಾಖಲಾತಿ ಪ್ರವೇಶಕ್ಕೆ ಅರ್ಜಿ ಪಡೆದು. ಜಿಲ್ಲಾ ಕಛೇರಿ/ವಸತಿ ಶಾಲೆಗೆ ಅರ್ಜಿ ಸಲ್ಲಿಸುವುದು.

ಹೆಚ್ಚಿನ ವಿವರಗಳಿಗಾಗಿ ಆಯಾ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸುವುದು. ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ದೇವನಾಯಕನಹಳ್ಳಿ, ದೂ.ಸಂ- 9900945262. 9742651522. 8073617143. 9986417499. 9742998287. ಪ್ರಾಂಶುಪಾಲರು, ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಗಿಡ್ಡಪ್ಪನಹಳ್ಳಿ, ಹೊಸಕೋಟೆ ತಾಲ್ಲೂಕು, ದೂ.ಸಂ- 9632933397, 8660971267 ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು (ಗ್ರಾ) ಜಿಲ್ಲೆ. ನಂ.216, 2ನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ-562110. ದೂ.ಸಂ- 080-29787455. ಸಂಪರ್ಕಿಸಬಹುದು ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಛೇರಿ ದೂ.ಸಂ- 080-27682882, 27627444, 27931899, 27725445, 8317403213 ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!