ದೊಡ್ಡಬಳ್ಳಾಪುರ (Doddaballapura): ಕೈಗಾರಿಕಾ ಪ್ರದೇಶದ ವೀರಾಪುರ ರಸ್ತೆ ಬದಿಯಲ್ಲಿರುವ ಪ್ಲಾಸ್ಮಿಕ್ಸ್ ಕಂಪನಿಯಲ್ಲಿ ಬುಧವಾರ ಬೆಳಗಿನ ಜಾವ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲವಾಗಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ.
8 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.