ಘಾಟಿ ಸುಬ್ರಹ್ಮಣ್ಯ: ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ

Ghati Subrahmanya: 66 Couple enter married life in free mass wedding

ದೊಡ್ಡಬಳ್ಳಾಪುರ: ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ (Ghati Subrahmanya) ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಘಾಟಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 66 ನೂತನ ಜೋಡಿಗಳು ಸತಿ-ಪತಿಗಳಾದರು.

ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ನೂತನ ವಧು-ವರರಿಗೆ ಆಶಿರ್ವದಿಸಿ ಶುಭ ಹಾರೈಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಶುಭ ಲಗ್ನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ.

ಈ ಪುಣ್ಯ ಕಾರ್ಯಕ್ರಮಕ್ಕೆ ಬಂದಿರುವುದು ನನಗೂ ಹೆಮ್ಮೆ ಇದೆ. ಬಡವರಿಗೆ, ಹಿಂದುಳಿದವರಿಗೆ, ಸರಳ ವಿವಾಹ ಬಯಸುವವರಿಗೆ ಈ ಸಾಮೂಹಿಕ ವಿವಾಹ ಬಹಳ ಸಹಕಾರಿಯಾಗಿದೆ.

ಸಾಲ ಮಾಡಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಆಗುವ ಮದುವೆಗಳಿಂದ, ಮುಂದೆ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಬಹುದು. ಸರಳ ವಿವಾಹ ಆಗುವುದರಿಂದ ನೆಮ್ಮದಿಯ ಜೀವನ ನಡೆಸಬಹುದು.

ದೇವರ ಸನ್ನಿದಾನದಲ್ಲಿ ನೆರವೇರಿರುವ ಈ ಸಾಮೂಹಿಕ ವಿವಾಹ ಶ್ರೇಷ್ಠವಾಗಿದೆ. ತಮಗೆ ಉತ್ತಮ ಜೀವನ, ಆರೋಗ್ಯ ಭಾಗ್ಯ, ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ನವ ದಂಪತಿಗಳಿಗೆ ಶುಭ ಹಾರೈಸಿದರು.

ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ-ತಾಯಿ, ಕುಟುಂಬವನ್ನು ಚೆನ್ನಾಗಿ ಪೋಷಿಸಿ ಉತ್ತಮ ಜೀವನ ಸಾಗಿಸಲು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಪ್ರಾಧಿಕಾರ ಹಾಗೂ ಅಧಿಕಾರಿಗಳಿಗೆ ಸಚಿವರು ಧನ್ಯವಾದ ತಿಳಿಸಿದರು.

ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ರಥೊಡ್, ಇಒ ಮುನಿರಾಜು, ಪ್ರಾಧಿಕಾರದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]