ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ (Ghati Subrahmanya) ಕ್ಷೇತ್ರದಲ್ಲಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಇಂದು (ಮೇ 7) ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಸಲ್ಲುವ ಶುಭಕಟಕ ಲಗ್ನದಲ್ಲಿ ನಡೆಯಲಿದೆ.
ಈಗಾಗಲೇ ನೋಂದಾಯಿಸಿಕೊಂಡಿರುವ 67 ಜೋಡಿಗಳು ವಿವಾಹವಾಗಲಿದ್ದಾರೆ.
ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಮುಜರಾಯಿ, ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಾ.ಕೆ.ಸುಧಾಕರ್, ಶಾಸಕರಾದ ಧೀರಜ್ ಮುನಿರಾಜು, ಶರತ್ ಕುಮಾರ ಬಚ್ಚೇಗೌಡ, 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.
ಸಾಮೂಹಿಕ ವಿವಾಹ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.